ಕೊಪ್ಪಳ ಜಿಲ್ಲಾಧಿಕಾರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
Koppal District Collector wins Best District Election Officer award
ಕೊಪ್ಪಳ 19 : 2025-26ನೇ ಸಾಲಿನಲ್ಲಿ ಆಚರಿಸಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜನವರಿ 19 ರಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಇವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ.
ಭಾರತ ಚುನಾವಣಾ ಆಯೋಗದಿಂದ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯಗಳಲ್ಲಿ ಹಾಗೂ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯಗಳಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಮತದಾರರ ನೋಂದಣಾಧಿಕಾರಿಗಳಿಗೆ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ, ಬಿಎಲ್‌ಓ ಮೇಲ್ವಿಚಾರಕರಿಗೆ ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಇದರೊಂದಿಗೆ 64-ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ:208 ರ ಬೂತ್ ಮಟ್ಟದ ಅಧಿಕಾರಿಯಾದ ಹಿರೇಬಗನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕರಾದ ಸತೀಶಚಂದ್ರ ಇವರಿಗೆ ಉತ್ತಮ ಬೂತ್ ಮಟ್ಟದ ಅಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿ, ಸಿಬ್ಬಂದಿಗಳಿಗೆ ಜನವರಿ 25 ರಂದು ಬೆಂಗಳೂರಿನ ಶ್ರೀ ಪುಟ್ಟಣ್ಣಚೆಟ್ಟಿ ಟೌನ್‌ಹಾಲ್‌ನಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 