ಕೊಪ್ಪಳ ಹಣ್ಣು-ಜೇನು ಹಬ್ಬ: ಮಹಾ ಶಿವರಾತ್ರಿ ಪ್ರಯುಕ್ತ ತೋಟಗಾರಿಕೆ ಇಲಾಖೆಯ ವಿಶೇಷ

Koppal Fruit-Honey Festival: Special of Horticulture Department on the occasion of Maha Shivratri

ಕೊಪ್ಪಳ ಹಣ್ಣು-ಜೇನು ಹಬ್ಬ: ಮಹಾ ಶಿವರಾತ್ರಿ ಪ್ರಯುಕ್ತ ತೋಟಗಾರಿಕೆ ಇಲಾಖೆಯ ವಿಶೇಷ 

ಕೊಪ್ಪಳ 23: ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಪಳ ತೋಟಗಾರಿಕೆ ಇಲಾಖೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಫೆಬ್ರವರಿ 23 ರಿಂದ ಫೆ. 27 ರವರೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾದ “ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಹಲಸು, ಅಣಬೆ ಹಾಗೂ ಜೇನು” ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಭಾನುವಾರ ಚಾಲನೆ ನೀಡಿದರು.  

 ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ.ಸಿ ಉಕ್ಕುಂದ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೆ.ಶಂಕ್ರ​‍್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ತೋಟಗಾರಿಕೆ ಬೆಳೆಗಾರರು, ರೈತರು ಹಾಗೂ ತೋಟಗಾರಿಕೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.  

ಹಣ್ಣು ಮತ್ತು ಜೇನು ಮೇಳದ ವಿಶೇಷತೆ : ಈ ವರ್ಷದ ಮಹಾಶಿವರಾತ್ರಿ ಪ್ರಯುಕ್ತ ಕಲ್ಯಾಣ ಕರ್ನಾಟಕದ ಹಣ್ಣಿನಕಣಜ ಎಂದೇ ಖ್ಯಾತಿ ಪಡೆದ ಕೊಪ್ಪಳ ಜಿಲ್ಲೆಯ ಹಣ್ಣು ಬೆಳೆಗಾರರಿಗೆ ಹಾಗೂ ಎಲ್ಲಾ ಹಣ್ಣುಗಳನ್ನು ಸವಿಯುವ ಗ್ರಾಹಕರಿಗೆ 8ನೇ ವರ್ಷದ ಹಣ್ಣು ಮತ್ತು ಜೇನು ಮೇಳವನ್ನು 5 ದಿನಗಳ ಕಾಲ ತೋಟಗಾರಿಕೆ ಇಲಾಖೆಯಿಂದ ಏರಿ​‍್ಡಸಲಾಗಿದ್ದು, ಫೆಬ್ರವರಿ 27ರ ವರೆಗೆ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಬಾಳೆ, ಪಪ್ಪಾಯ, ಹಲಸು, ಅಣಬೆ ಮತ್ತುಜೇನು ಮೇಳವು ನಡೆಯಲಿದೆ.  

 ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಬೇಸಿಗೆ ಹಂಗಾಮಿನಲ್ಲಿ ಮಹಾಶಿವರಾತ್ರಿ ಹಬ್ಬಕ್ಕೆ ಲಭ್ಯವಿರುವ ವಿವಿಧ ಬಗೆಯ ಹತ್ತಾರು ಹಣ್ಣುಗಳ ವಿವಿಧ ತಳಿಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಈ ಮಹಾಮೇಳವನ್ನು ಆಯೋಜಿಸಲಾಗಿದೆ.  

ಜಗತ್ತಿನ ಅತ್ಯಂತ ದುಬಾರಿಯ ರೂಬಿ ರೋಮನ್ ಹಣ್ಣಿನ ಪ್ರದರ್ಶನ: ಈ ಮೇಳದ ಪ್ರದರ್ಶನದಲ್ಲಿ ಮುಖ್ಯ ಆಕರ್ಷಣೆ ಜಪಾನಿನಲ್ಲಿ ಬೆಳೆಯುವ ಜಗತ್ತಿನ ಅತ್ಯಂತ ದುಬಾರಿ ದ್ರಾಕ್ಷಿ ಹಣ್ಣು, ಪ್ರತ್ರಿ ಕೆ.ಜಿ.ಗೆ ರೂ. 8 ಲಕ್ಷ ಮೌಲ್ಯದ ರೂಬಿ ರೋಮನ್ದ್ರಾಕ್ಷಿ ಹಣ್ಣನ್ನು ಪ್ರದರ್ಶನದಲ್ಲಿ ಇಡಲಾಗಿದೆ. ಇದರೊಂದಿಗೆ ವಿವಿಧ ವಿದೇಶಿ ಹಣ್ಣಿನ ತಳಿಗಳಾದ ಅವಕಾಡೋಫ್ಲಮ್, ಪೀಚ್, ಲಿಚ್ಚಿ, ರೆಡ್ಗ್ಲೋಬ್, ಕಿವಿ ಫ್ರೂಟ್, ರಾಮಭೂತಾನ, ಮ್ಯಾಂಗೋಸ್ಟೀನ್, ಜಪಾನ ಮ್ಯಾಂಗೂ, ಐಸ್ಗಾವಾ, ಅಮೇರಿಕನ್ ಆಪಲ್, ಗ್ರೀನ್ ಆಪಲ್, ವಿದೇಶಿ ಪ್ಯಾಷನ್ ಪ್ರೂಟ್, ವೈನ್ಗ್ರೇಪ್ ಮುಂತಾದವುಗಳನ್ನು ಹಾಗೂ ಸ್ವದೇಶಿ ಹಾಗೂ ಜಿಲ್ಲೇಯರೈತರು ಬೆಳೆದ ಪ್ಪಪಾಯ, ದ್ರಾಕ್ಷಿ, ಕಲ್ಲಂಗಡಿ, ಪರಲ, ಅಂಜೂರ, ಪಪ್ಪಾಯ, ಹಲಸು, ಬಾಳೆ, ಸಪೋಟ, ಅಣಬೆ, ಜೇನು ಅಲ್ಲದೇ ಅದಕ್ಕೆ ಪೂರಕವಾದ ಜೇನಿನ ಉಪ ಉತ್ಪನ್ನಗಳು ಹಾಗೂ ಮೌಲ್ಯವರ್ಧಿತ ಉತ್ಪನ್ನಗಳು ಪ್ರದರ್ಶನದಲ್ಲಿ ಇಡಲಾಗಿದೆ.  

 ಈ ಎಲ್ಲಾ ಹಣ್ಣುಗಳನ್ನು ಹಾಗೂ ಈ ಹಣ್ಣುಗಳ ಮೌಲ್ಯವರ್ಧಿತ ಉತ್ಪನ್ನಗಳನ್ನು ಜ್ಯೂಸ್, ಜಾಮ್, ಜೆಲ್ಲಿ, ಪುಡಿ, ಸೋಪ, ಇತ್ಯಾಧಿಗಳನ್ನು ಗ್ರಾಹಕರ ಆರೋಗ್ಯ ವೃದ್ಧಿ ದೃಷ್ಟಯಿಂದ ಮಾರಾಟ ಮಾಡಲಾಗುತ್ತಿದೆ. ಮೇಳದಲ್ಲಿ ರೈತರಿಗಾಗಿ ಉಚಿತವಾಗಿ ಸ್ಟಾಲ್ಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಾಗಿ ಆಯೋಜಿಸಲಾಗಿದ್ದು, 30ಕ್ಕೂ ಹೆಚ್ಚು ಹಣ್ಣುಬೆಳೆಗಾರರು, 15 ರೈತ ಉತ್ಪಾದಕ ಕಂಪನಿಗಳಲ್ಲದೇ ಜಿಲ್ಲಾ ಹಾಪಕಾಮ್ಸ್‌ ಸಂಸ್ಥೆಗಳಿಗೆ ಕೂಡಾ ಸ್ಟಾಲ್ಗಳ ವ್ಯವಸ್ಥೆ ಮಾಡಲಾಗಿದೆ. ರೈತ ಉತ್ಪಾದಕ ಕಂಪನಿಗಳು ಹಾಗೂ ಜಿಲ್ಲಾ ಹಾಪಕಾಮ್ಸ್‌ ಕೊಪ್ಪಳ ನೂರಾರು ಸದಸ್ಯ ರೈತರಿಂದ ವಿವಿಧ ಹಣ್ಣುಗಳನ್ನು ಖರೀದಿಸಿ ಈ ಮೇಳದಲ್ಲಿ ಮಾರಾಟ ಮಾಡುವುದರಿಂದ ಈ ಮೇಳದಲ್ಲಿ ನೇರವಾಗಿ ಭಾಗವಹಿಸಿದ ರೈತರಿಗೂ ಅನುಕೂಲವಾಗಿ ಯೋಗ್ಯ ಬೆಲೆ ಸಿಗುವಂತಾಗಿದೆ.  

 ಈ ವರ್ಷದ ಮೇಳದ ವಿಶೇಷವೆಂದರೇ ಬಾಕ್ಸ್‌ ಪ್ಯಾಕಿಂಗ್ ಮಾಡಿ ಗ್ರಾಹಕರಿಗೆ ಪೂರೈಸುತ್ತಿರುವುದು. ಇದರಿಂದಾಗಿ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ವ ಹಣ್ಣು ಬೆಳೆಗಾರರಿಗೆ ಮೇಳದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸದಂತಾಗಿದೆ. ಮೇಳದಲ್ಲಿ ಗ್ರಾಹಕರಿಗಾಗಿ ವಿಶೇಷ ಆಕರ್ಷಣೆಗೆಂದು ಹಣ್ಣುಗಳಿಂದ ಅಲಂಕೃತವಾದ ಸೆಲ್ಫಿ ಪಾಂಯಿಂಟ್ನ್ನುಕೂಡಾ ಆಯೋಜಿಸಲಾಗಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.  

 ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿರೈತರಿಗೆ ಸಬ್ಸಿಡಿದರದಲ್ಲಿ ಹಣ್ಣುಗಳನ್ನು ಪ್ಯಾಕ ಮಾಡಿ ಸರಬರಾಜು ಮಾಡಲು ಆಕರ್ಷಿಣೀಯವಾದ ರಟ್ಟಿನ ಡಬ್ಬಿಗಳನ್ನು ವಿತರಿಸಲಾಗುತ್ತಿದೆ. ಇವುಗಳ ಮೇಲೆ ರೈತರ ಹೆಸರು, ಹಣ್ಣುಗಳು ಅವುಗಳ ವಿವಿಧತಳಿ, ಅಲ್ಲದೇ ದರವನ್ನು ಕೂಡಾ ಮುದ್ರಿಸಿದ್ದು, ರೈತರಿಗೂ, ಗ್ರಾಹಕರಿಗೂ ಇದು ಅತ್ಯಂತ ಪ್ರಯೋಜನಕಾರಿಯಾಗಲಿದೆ. ಅಲ್ಲದೇ ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯುತ್ತಿರುವ ಎಲ್ಲಾ ಹಣ್ಣುಗಳ ಹಾಗೂ ರೈತರ ಹೆಸರು ಕೂಡ ದೂರದೂರಕ್ಕೆ ಪಸರಿಸಿದಂತಾಗುತ್ತದೆ. ಹೀಗಾಗಿ ಮಾರುಕಟ್ಟೆ ಒದಗಿಸಿದಂತಾಗುತ್ತದೆ.  

 ಈ ಮೇಳದಲ್ಲಿ ವಿವಿಧ ಜೇನಿನ ತುಪ್ಪಗಳು ಹಾಗೂ ಜೇನಿನ ಪರಿಕರಗಳಾದ ಜೇನಿನ ಮೇಣದ ಲಿಪ್ಬಾಂಬ್, ಜೇನಿನಲ್ಲಿ ನೇನಸಿದ ಕಾಡುನೆಲ್ಲಿ ಹಾಗೂ ವಿವಿಧ ಆರ್ಯವೇದ ಗಿಡಮೂಲಿಕೆಗಳನ್ನು ಸೇರಿಸಿ ತಯಾರಿಸಿದ ವಿವಿಧ ಬಗೇಯಜೇನಿನ ತುಪ್ಪಗಳು ಸಹ ಮಾರಾಟಕಕ್ಕೆ ಲಭ್ಯವಿದೆ. ಹಲಸಿನ ಹಣ್ಣಿನಿಂದ ತಯಾರಿಸಿದ ಹಪ್ಪಳ, ಹಲಸಿನ ಪುಡಿ, ಹಲಸಿನ ಚಿಪ್ಸ, ಹಲಸಿ ಮುಂತಾದ ಪರಿಕರಗಳು ಲಭ್ಯವಿರುತ್ತದೆ. ಹಾಗೂ ತಾಜಾ ಅಣಬೆ, ಒಣಗಿಸಿದ ಅಣಬೆ, ಅಣಬೆ ಉಪ್ಪಿನಕಾಯಿ, ಅಣಬೆ ಪುಡಿ ಹಾಗೂ ಅಣಬೆ ಬಿಸ್ಕೇಟ್ಗಳು ಸಹ ಮೇಳದಲ್ಲಿ ಲಭ್ಯವಿರುತ್ತದೆ. ಹಾಗೂ ಗೂಡಂಬಿ, ಒಣ ದ್ರಾಕ್ಷಿ ಸಹ ಲಭ್ಯವಿರುತ್ತದೆ.  

 ಇದಲ್ಲದೇ ಎಲ್ಲಾ ಹಣ್ಣುಗಳಲ್ಲಿ ಲಭ್ಯವಿರುವ ಪೋಷಕಾಂಶಗಳು, ಖನಿಜಗಳು ಮತ್ತು ಅವುಗಳ ಆರೋಗ್ಯದ ಬಗ್ಗೆ ಮಹತ್ವ ತಿಳಿಸುವ ಬ್ಯಾನರ್ಗಳನ್ನು ಪ್ರದರ್ಶಿಸಲಾಗುತ್ತಿದ್ದು, ಗ್ರಾಹಕರಿಗೆ ಇದೊಂದು ವಿಶಿಷ್ಟ ಅನುಭವ ನೀಡಬಲ್ಲದಾಗಿದೆ. "ಎಲ್ಲಾ ಹಣ್ಣುಗಳನ್ನು ಸೇವಿಸಿ ಜೇನು ಸವಿದು ಆರೋಗ್ಯ ಭಾಗ್ಯ ಪಡೆಯಿರಿ" ಎಂಬುದೇ ಈ ಮೇಳದ ದ್ಯೇಯವಾಗಿದೆ. 5 ದಿನಗಳ ಕಾಲ ನಡೆಯುವ ಹಣ್ಣು ಮತ್ತು ಜೇನು ಮೇಳದಲ್ಲಿ ಭಾಗವಹಿಸಿ, ತಾಜಾ ಹಣ್ಣುಗಳನ್ನು ರೈತರಿಂದ ಖರೀದೀಸಿ, ರೈತರನ್ನು ಪ್ರತ್ಸಾಹಿಸಬೇಂಕೆದು ಎಲ್ಲಾ ಗ್ರಾಹಕರಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆಯು ಮನವಿ ಮಾಡಿದೆ.