ಲೋಕದರ್ಶನ ವರದಿ
ಕೊಪ್ಪಳ 05: ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯಥರ್ಿ ಕೆ.ರಾಜಶೇಖರ ಹಿಟ್ನಾಳ ಅವರು ಗುರುವಾರದಂದು ನಗರದ ಜಿಲ್ಲಾಡಳಿತ ಭವನದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಪಿ.ಸುನೀಲ್ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಜನತೆಯ ಒಲವು ಕಾಂಗ್ರೆಸ್ ಪರವಾಗಿದೆ ಎಂದರು.
ರಾಜ್ಯದ ಪಶುಸಂಗೋಪನ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡರು, ಮಾಜಿ ಸಚಿವ ಬಸವರಾಜ್ ರಾಯರಡ್ಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.