ರಾಜ್ಯ ಯುವ ಆಯೋಗ ಸ್ಥಾಪಿಸಲು ಕೊಪ್ಪಳ ಸೋಲಿಡಾರಿಟಿ ಯೂತ್ ಮೊಮೆಂಟ್ ಒತ್ತಾಯ
Koppal Solidarity Youth Moment demands establishment of State Youth Commission
ಕೊಪ್ಪಳ 21: ಕಾಂಗ್ರೆಸ್ ಪಕ್ಷವು ತನ್ನ 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸ್ಥಾಪಿಸುವ ಭರವಸೆಯನ್ನು ಜ್ಞಾಪಿಸುತ್ತಾ, ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣವೇ ಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳುವ ಉದ್ದೇಶದಿಂದ ಕೊಪ್ಪಳ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಕೊಪ್ಪಳ ಸೋಲಿದಾರಿಟಿ ಯೂತ್ ಮುಮೆಂಟ್ ಒತ್ತಾಯಿಸಿದೆ, ರಾಜ್ಯದಲ್ಲಿ ಯುವ ಜನತೆಯ ಶಿಕ್ಷಣ, ಉದ್ಯೋಗ, ಸಾಮಾಜಿಕ ನ್ಯಾಯ, ರಾಜಕೀಯ ಭಾಗವಹಿಸುವಿಕೆ ಹಾಗೂ ನೀತಿ ರೂಪಣೆಯಲ್ಲಿ ಯುವಕರ ಪ್ರತಿನಿಧಿತ್ವವನ್ನು ಬಲಪಡಿಸಲು ಯುವ ಆಯೋಗದ ಸ್ಥಾಪನೆ ಅತ್ಯಂತ ಅಗತ್ಯವಾಗಿದೆ.
ಸರ್ಕಾರ ತನ್ನ ಚುನಾವಣಾ ಭರವಸೆಯನ್ನು ಅನುಷ್ಠಾನಕ್ಕೆ ತಂದು ಕರ್ನಾಟಕ ರಾಜ್ಯ ಯುವ ಆಯೋಗವನ್ನು ಶೀಘ್ರದಲ್ಲೇ ಸ್ಥಾಪಿಸಬೇಕು ಎಂಬ ನೀರೀಕ್ಷೆಯನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವ್ಯಕ್ತಪಡಿಸಿದೆ. ಇದರಿಂದ ರಾಜ್ಯದ ಕೋಟ್ಯಾಂತರ ಯುವಕರ ಧ್ವನಿಗೆ ಸಂವಿಧಾನಾತ್ಮಕ ಮಾನ್ಯತೆ ದೊರೆಯುವುದರ ಜೊತೆಗೆ, ಯುವ ಕೇಂದ್ರಿತ ನೀತಿಗಳ ರೂಪಣೆಗೆ ಹೊಸ ದಿಕ್ಕು ಸಿಗಲಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.ಈ ಹಿನ್ನೆಲೆಯಲ್ಲಿ, ಕೊಪ್ಪಳದ ಉಪ-ತಹಶೀಲ್ದಾರ್ ಗಳಾದ ಗವಿಸಿದ್ದಪ್ಪ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘಟನೆಯ ನಗರಾಧ್ಯಕ್ಷರಾದ ಏಜಾಜ್ ಶರೀಫ್, ಕಾರ್ಯಕರ್ತರಾದ ಸಾಜಿದ್ ಹುಸೇನ್, ರಹೆಮತ್ ಹುಸೇನ್ ಹಾಗೂ ಮೊಹಮ್ಮದ ಯೂಸುಫ್ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 