ಫೆ.5 ರಿಂದ 7 ರವರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರಿಂದ ಕೊಪ್ಪಳ ಜಿಲ್ಲಾ ಪ್ರವಾಸ
Koppal district tour by State Women's Commission Chairperson Dr. Nagalakshmi Chaudhary from Feb. 5
ಕೊಪ್ಪಳ 31 : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರವರಿ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ಫೆ.5 ರಂದು ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಕೊಪ್ಪಳದ ವಾರ್ಡ್ ನಂ.28, ಸಿದ್ದೇಶ್ವರ ನಗರದ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ, ಅಲೆಮಾರಿ ಸಮುದಾಯದ ಮಹಿಳೆಯರ ಸಮಸ್ಯೆಗಳನ್ನು ಆಲಿಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದೇವದಾಸಿ ಮಹಿಳೆಯರೊಂದಿಗೆ ಸಂವಾದ ನಡೆಸುವರು. ಸಂಜೆ 6 ಗಂಟೆಗೆ ಕೊಪ್ಪಳದ ಅಲ್ಪಸಂಖ್ಯಾತ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿನಿಲಯಕ್ಕೆ ಭೇಟಿ ನೀಡುವರು. ಅಂದು ರಾತ್ರಿ ಕೊಪ್ಪಳದಲ್ಲಿಯೇ ವಾಸ್ತವ್ಯ ಮಾಡುವರು.
ಫೆ.6 ರಂದು ಬೆಳಿಗ್ಗೆ 10 ಗಂಟೆಗೆ ಅಧ್ಯಕ್ಷರು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ ಕಓಖಊ ಅಧಿನಿಯಮ 2013ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮಧ್ಯಾಹ್ನ 12 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ 1.15 ಗಂಟೆಗೆ ಕುಷ್ಟಗಿಗೆ ತೆರಳಿ, ಕುಷ್ಟಗಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಕುಷ್ಟಗಿ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಕುಷ್ಟಗಿಯ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಸಂಜೆ 6 ಗಂಟೆಗೆ ಕುಷ್ಟಗಿಯಿಂದ ನಿರ್ಗಮಿಸಿ ರಾತ್ರಿ 7.15 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ವಾಸ್ತವ್ಯ ಮಾಡುವರು.
ಫೆ.7 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಮಹಿಳಾ ಸ್ಪಂದನಾ ಕಾರ್ಯಕ್ರಮ ಹಾಗೂ ಮಹಿಳಾ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ವಿವಿಧ ಮಾಧ್ಯಮದವರೊಂದಿಗೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 6.30 ಗಂಟೆಗೆ ಕೊಪ್ಪಳದಿಂದ ರೈಲಿನ ಮೂಲಕ ನಿರ್ಗಮಿಸಿ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 