ಗದಗ 25: ಗದಗ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರ ನಿದರ್ೇಶನದಂತೆ ಕೋವಿಡ್-19 ಆರೋಗ್ಯ ತಪಾಸಣೆ ಜರುಗಿತು. ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಹಳೆಯ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿರುವ ಆರೋಗ್ಯ ತಪಾಸಣೆ ಕಾರ್ಯ ಪರಿಶೀಲಿಸಿ ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಮಾಧ್ಯಮ ಪ್ರತಿನಿಧಿಗಳು ತಮ್ಮ ಆರೋಗ್ಯ ತಪಾಸಣೆಯನ್ನು ಸರಿಯಾಗಿ ಮಾಡಿಸಿಕೊಳ್ಳಲು ತಿಳಿಸಿದರು. ಗದಗ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಮಾಧ್ಯಮ ಪ್ರತಿನಿಧಿಗಳ ಸಂಘದ ಸಹಯೋಗದಲ್ಲಿ ದಿ: 24 ರಿಂದ 26 ರವರೆಗೆ ಮೂರು ದಿನ ಪ್ರತಿದಿನ ಮುಂಜಾನೆ 10 ರಿಂದ ಮ. 12 ರ ಅವಧಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಕೋವಿಡ್-19 ಆರೋಗ್ಯ ತಪಾಸಣೆಗೆ ಕ್ರಮ ಜರುಗಿಸಲಾಗಿದೆ ಎಂದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ ತಿಳಿಸಿದರು. ವೈದ್ಯರಾದ ಡಾ. ಮಹೇಶ ಕೊಪ್ಪಳ , ಸ್ಟಾಫ್ ನರ್ಸಗಳಾದ ಪ್ರಿಯಾ ಅಕ್ಕಣ್ಣವರ ಹಾಗೂ ವನಿತಾ ನಾಯಕ ಅವರು ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ತಪಾಸಣೆ ನಡೆಸಿದರು. ಮೊದಲ ದಿನ 41 ಜನ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.