ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆ: ಕುಡಚಿ ಸೇತುವೆ ಮುಳುಗಡೆ ರಸ್ತೆ ಬಂದ
Krishna River water level rises: Kudachi bridge submerged, road exposed
ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆ: ಕುಡಚಿ ಸೇತುವೆ ಮುಳುಗಡೆ ರಸ್ತೆ ಬಂದ
ಕಾಗವಾಡ 29: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮತ್ತು ಕೃಷ್ಣಾ ನದಿ ಹಾಗೂ ಅದರ ಉಪನದಿಗಳ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಚಿಕ್ಕೋಡಿ ಉಪವಿಭಾಗದ ಎಲ್ಲ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆ ಜೋಡಿಸುವ ಪ್ರಮುಖ ರಾಯಬಾಗ ತಾಲೂಕಿನ ಕುಡಚಿ ಸೇತುವೆ ಮೇಲೆ ನೀರು ಬಂದಿದ್ದು, ರಸ್ತೆಯನ್ನು ಬಂದ ಮಾಡಲಾಗಿದೆ. ಇದರಿಂದಾಗಿ ಬಾಗಲಕೋಟೆ ಜಿಲ್ಲೆಯೊಂದಿಗೆ ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ಗ್ರಾಮಗಳ ಸಂಪರ್ಕ ಕಡಿತಗೊಂಡಿತ್ತು. ಪ್ರಯಾಣಿಕರು ರಸ್ತೆ ಸುತ್ತಿ ಬಳಿಸಿ ಪ್ರಯಾಣಿಸುವ ಅನಿರ್ವಾತೆ ಉಂಟಾಗಿದೆ. ಕುಡಚಿ ಮತ್ತು ಕಾಗವಾಡ ಪೋಲಿಸರು ಸೇತುವೆ ಎರಡೂ ಬದಿಗೆ ಬ್ಯಾರಿಕೆಡ್‌ಗಳನ್ನು ಅಳವಡಿಸಿ, ಯಾರೂ ಕೂಡಾ ಸೇತುವೆ ದಾಟದಂತೆ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಮಳೆಯು ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾದರೂ ಮಹರಾಷ್ಟ್ರದಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಕುಡಚಿ ಸೇತುವೆ ಯಾವಾಗ ಸಂಚಾರಕ್ಕೆ ಮುಕ್ತವಾಗುವುದು ಎಂಬುದು ಕೃಷ್ಣಾ ನದಿಯ ನೀರಿನ ಮಟ್ಟದ ಮೇಲೆ ಅವಲಂಬಿತಗೊಂಡಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 