ಪುದುಚೆರಿಯಲ್ಲಿ ಎರಡನೇ ದಿನವೂ ಕುಂಭದ್ರೋಣ ಮಳೆ ಮುಂದುವರಿಕೆ
ಪುದುಚೆರಿ, ಡಿ 1-ಪುದುಚೆರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡನೇ ದಿನವೂ ಧಾರಾಕಾರ ಮಳೆ ಮುಂದುವರೆದಿದ್ದು, ಭಾನುವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಜನ-ಜೀವನ ಅಸ್ತವ್ಯಸ್ತಗೊಂಡಿದೆ.
ಪುದುಚೆರಿಯಲ್ಲಿ ಕಳೆದ ಒಂದು ವಾರದಿಂದ ಮಳೆ ಬೀಳುತ್ತಿದೆ. ಈಶಾನ್ಯ ಮುಂಗಾರು ತೀವ್ರಗೊಂಡಿದ್ದರಿಂದ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಪ್ರದೇಶಗಳಲ್ಲಿ ನಿಂತಿರುವ ನೀರು ಪಂಪ್ ಮಾಡುವಲ್ಲಿ ಆಡಳಿತ ಯಂತ್ರ ನಿರತವಾಗಿದೆ. ಅನೇಕ ರಸ್ತೆಗಳು ನೀರಿನಲ್ಲಿ ಮುಳುಗಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ರಸ್ತೆಗಳೂ ಹಾನಿಗೊಂಡಿವೆ. ಭಾನುವಾರವಾದ್ದರಿಂದ ವಾಹನ ಸಂಚಾರ ಕಡಿಮೆ ಇತ್ತು. ಪುದುಚೆರಿಯ ಅನೇಕ ಕೆರೆ ಕುಂಟೆಗಳು ಭಾರೀ ಮಳೆಯಿಂದ ಬೇಗನೆ ತುಂಬುತ್ತಿವೆ.
ಭಾನುವಾರ ಬೆಳಿಗ್ಗೆ 8.30ರ ವೇಳೆಗೆ ಕಳೆದ 24 ತಾಸಿನಲ್ಲಿ ಪುದುಚೆರಿಯಲ್ಲಿ 11.4 ಸೆಂ.ಮೀ ಮಳೆಯಾಗಿದೆ. ಈ ಮಧ್ಯೆ, ವಿಳ್ಳುಪುರಂನ ವೀಡುರ್ ಅಣೆಕಟ್ಟೆಯ ಗೇಟ್‍ಗಳನ್ನು ಯಾವುದೇ ವೇಳೆ ತೆಗೆಯಬಹುದಾಗಿದ್ದರಿಂದ ಶಂಕರಾಭರಣಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನ್ನಾಡಿಪೇಟ್ ಪಂಚಾಯಿತಿ ಆಡಳಿತ ತಿಳಿಸಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 