ಕಾರ್ಮಿಕ ಇಲಾಖೆಯ ಜಾಗೃತಿ ಜಾಥಾಕ್ಕೆ ಚಾಲನೆ
ಗದಗ 24: ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕ ಸಾಮಾಜಿಕ ಭದ್ರತಾ ಹಾಗೂ ಕಲ್ಯಾಣ ಯೋಜನೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಷ್ಮಾ, ಕಾರ್ಮಿಕ ನೀರೀಕ್ಷಕರು ಒಂದನೇ ವೃತ್ತ ಗದಗ ಇವರು ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.