ಬೆಂಗಳೂರು, ಜೂ 9, ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿರುವ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಪಕ್ಷಕ್ಕೆ ನಿಮ್ಮ ಮಾರ್ಗದರ್ಶನ ಸದಾ ಇರಲಿ ಎಂದು ಹೇಳಿದ್ದಾರೆ. ಖರ್ಗೆ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಅವರು, ನಿಮ್ಮ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ಉತ್ತುಂಗಕ್ಕೆ ಬೆಳೆಯಲಿ ಹಾಗೂ ನಿಮ್ಮ ಮಾರ್ಗದರ್ಶನ ಕಾಂಗ್ರೆಸ್ ಪಕ್ಷಕ್ಕೆ ದಾರಿದೀಪವಾಗಿರಲಿ ಎಂದು ಅವರು ಕೋರಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ, ಹಾಗೂ ಪಕ್ಷದ ಎಲ್ಲ ನಾಯಕರು ಉಪಸ್ಥಿತರಿದ್ದರು.