ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ ಕುಷ್ಟರೋಗದ ಬಗ್ಗೆ ಜಾಗೃತಿ ಮೂಡಿಸೋಣ - ಡಾ.ಗಡಾದ
Launch of the Touch Leprosy Awareness Campaign Let's create awareness about leprosy - Dr. Gadada
ಗದಗ 30: ಕುಷ್ಟರೋಗವು ಮೈಕೋ ಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುತ್ತದೆ. ಇದು ಯಾವುದೇ ದೇವರ ಶಾಪವಲ್ಲ ಪಾಪಗಳ ಫಲವಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುವ ಬಹುವಿಧ ಚಿಕಿತ್ಸೆಯ ಮೂಲಕ ತಡೆಗಟ್ಟಬಹುದಾಗಿದೆ. ಕುಷ್ಟರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೊಡೆದೊಡಿಸಿ ಜಾಗೃತಿ ಮೂಡಿಸೋಣ ಎಂದು ಗದಗ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್ ಗಡಾದ ಅವರು ಹೇಳಿದರು.
ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಏರಿ್ಡಸಲಾದ ಪೂಜ್ಯ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಹುತಾತ್ಮರ ದಿನಾಚರಣೆ ಹಾಗೂ ಕುಷ್ಟರೋಗ ನಿರ್ಮೂಲನ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮೇಲಿನಂತೆ ಮಾತನಾಡಿದ ಡಾ. ಗಡಾದವರು ಪ್ರಾರಂಭಿಕ ಹಂತದಲ್ಲಿ ಕುಷ್ಟರೋಗದ ಲಕ್ಷಣಗಳನ್ನು ಗುರುತಿಸಿ ಕ್ರಮಬದ್ಧ ಚಿಕಿತ್ಸೆ ನೀಡಿದಲ್ಲಿ ಅಂಗವಿಕಲತೆಯನ್ನು ತಡೆಗಟ್ಟಬಹುದು ಮತ್ತು ಕುಷ್ಟರೋಗ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸೋಂಕನ್ನ ನಿಲ್ಲಿಸಬಹುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಸರ್ವರಿಗೂ ಪ್ರತಿಜ್ಞಾವಿಧಿಯನ್ನ ಬೋಧಿಸಿದ ಗಡಾದವರು ಪೂಜ್ಯ ಮಹಾತ್ಮಗಾಂಧೀಜಿಯವರ ಭಾವಚಿತ್ರದ ಪೂಜೆಯೊಂದಿಗೆ ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನ 2026 ಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕ ಹಿರಿಯ ಆರೋಗ್ಯ ನೀರೀಕ್ಷಾಧಿಕಾರಿ ಯಲ್ಲಪ್ಪ ಹಕ್ಕಿ ,ತಾಲೂಕ ಹಿರಿಯ ಪ್ರಾಥಮಿಕ ಸುರಕ್ಷಣಾಧಿಕಾರಿ ಶ್ರೀಮತಿ ಸರೋಜಾ ಕಟ್ಟಿಮನಿ ಪ್ರಥಮ ದರ್ಜೆ ಸಹಾಯಕರಾದ ಸಲೀಂ ನದಾಫ್, ಉಮೇಶ್ ಅಕ್ಕಸಾಲಿಗ, ಶ್ರೀದೇವಿ ತಹಶಿಲ್ದಾರ್, ಹಿರಿಯ ಪ್ರಾಥಮಿಕ ಸುರಕ್ಷಣಾಧಿಕಾರಿ ಗಳಾದ ಶ್ರೀಮತಿ ಆರ್ ಆರ್ ಆದೆಣ್ಣನವರ, ಎಸ್ ಎಲ್ ಪವಾರ, ನೇತ್ರಾ ಸುರುಣಗಿ ಎಸ್ ಪಿ ಕಳಸಣ್ಣವರ, ಶ್ರೀ ಗುಡದಪ್ಪ ಜಗ್ಗಿನ, ಶ್ರೀಮತಿ ಪುಷ್ಪಲತಾ ಮಡಿವಾಳರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 