ಉಪನ್ಯಾಸಕಿ ಜ್ಯೋತಿ ಸಿ.ಎಂ ಅವರಿಗೆ ರಾಜ್ಯ ಪ್ರಶಸ್ತಿ ಪ್ರಧಾನ
Lecturer Jyoti CM receives state award
ಉಪನ್ಯಾಸಕಿ ಜ್ಯೋತಿ ಸಿ.ಎಂ ಅವರಿಗೆ ರಾಜ್ಯ ಪ್ರಶಸ್ತಿ ಪ್ರಧಾನ
ಬೆಳಗಾವಿ, ಸೆ.04 : ನಗರದ ಶಹಾಪುರದಲ್ಲಿರುವ ಸರ್ಕಾರಿ ಚಿಂತಾಮಣಿ ರಾವ್ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡ ಉಪನ್ಯಾಸಕರಾದ ಜ್ಯೋತಿ ಸಿ .ಎಂ ಅವರು ರಾಜ್ಯ ಸರ್ಕಾರ ನೀಡುವ ಉತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜ್ಯೋತಿ ಸಿ.ಎಂ. ಅವರು ವಿವಿಧ ಸಂಘ ಸಂಸ್ಥೆಗಳು ನೀಡುವ ರಾಷ್ಟ್ರ ಹಾಗೂ ರಾಜ್ಯ 92 ಕ್ಕಿಂತ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದು ಪ್ರತಿಶತ ನೂರರಷ್ಟು ಫಲಿತಾಂಶ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ರಾಷ್ಟ್ರೀಯ ಸೇವೆ ಯೋಜನೆ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ರೀಡಾ ಚಟುವಟಿಕೆಗಳು ಹಾಗೂ ಇನ್ನಿತರ ಎಲ್ಲಾ ರಂಗಗಳಲ್ಲಿ ತಮ್ಮದೇ ಆದ ಸೇವೆಯನ್ನ ಸಲ್ಲಿಸಿರುತ್ತಾರೆ. ಅಂತರಾಷ್ಟ್ರೀಯ ಸಾಂಸ್ಕೃತಿಕ ವಿಶ್ವವಿದ್ಯಾಲಯ ದವರು ಇವರ ಶಿಕ್ಷಣ, ಸಾಹಿತ್ಯ ಹಾಗೂ ಸಮಾಜ ಸೇವೆಯ ಕ್ಷೇತ್ರದ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿರುತ್ತಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಸೆ.05) ಬೆಳಿಗ್ಗೆ 10 ಗಂಟೆಗೆ ಬ್ಯಾಂಕ್ವೆಟ್ ಸಭಾಂಗಣ, ವಿಧಾನಸೌಧ ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರಿನಲ್ಲಿ ನಡೆಯುವ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ-2025 ದಲ್ಲಿ ಉಪನ್ಯಾಸಕರಾದ ಜ್ಯೋತಿ ಸಿ.ಎಂ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 