ಕಾನೂನು ಅರಿವು ನೆರವು ಕಾರ್ಯಕ್ರಮ
Legal Awareness Assistance Program
ಕಾನೂನು ಅರಿವು ನೆರವು ಕಾರ್ಯಕ್ರಮ
ಸವದತ್ತಿ 09: ತಾಲೂಕ ಕಾನೂನು ಸೇವೆಗಳ ಸಮಿತಿ ಸವದತ್ತಿ ಹಾಗೂ ವಕೀಲರ ಸಂಘ ಸವದತ್ತಿ ಮತ್ತು ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಆದರ್ಶ ಶಾಲೆಯಲ್ಲಿ ದಿ. 8ರಂದು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.
ಎಲ್ಲ ವಿದ್ಯಾರ್ಥಿಗಳಿಗೆ ಸಂವಿಧಾನ ಬದ್ಧವಾಗಿ ಎಲ್ಲ ಭಾರತೀಯ ನಾಗರಿಕರಿಗೆ ಇರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮತ್ತು ಖಾಯಂ ಜನತಾ ನ್ಯಾಯಾಲಯಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಶ್ರೇಣಿ ಸಿವ್ಹಿಲ್ ನ್ಯಾಯಾಧೀಶ ಸಿದ್ದರಾಮ ಅವರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ದೃಷ್ಟಾಂತಗಳ ಮೂಲಕ ವಿಶೇಷ ಉಪನ್ಯಾಸವನ್ನು ನೀಡಿದರು. ಜೊತೆಗೆ ಶಾಲೆಯ ಮಕ್ಕಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ, ಬಿಸಿಊಟ ಕುಡಿಯುವ ಶುದ್ಧ ನೀರು ಮತ್ತು ವಿದ್ಯಾರ್ಥಿಗಳ ಆರೋಗ್ಯದ ಕುರಿತು ವಿದ್ಯಾರ್ಥಿಗಳಿಗೆ ಖುದ್ದಾಗಿ ವಿಚಾರಿಸಿದರು. ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಒಳ್ಳೆಯ ನಾಗರಿಕ ಮೌಲ್ಯಗಳು ರೂಪಿಸಿಕೊಳ್ಳಲು ಸಲಹೆ ಸೂಚನೆಗಳನ್ನು ನೀಡಿದರು.
ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಪ್ರಾಚಾರ್ಯ ಆರ್ ಎಫ್ ಮಾಘಿ ವಹಿಸಿದ್ದರು. ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಜೆ ಬಿ ಮುನವಳ್ಳಿ ಉಪಾಧ್ಯಕ್ಷ ಎಂ ಎಸ್ ಹುಬ್ಬಳ್ಳಿ ವಕೀಲರು, ಮಹಿಳಾ ಪ್ರತಿನಿಧಿ ಸಾವಿತ್ರಿ ಶಿಭಾರಗಟ್ಟಿ ಮತ್ತು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳು ಮತ್ತು ಸರ್ಕಾರಿ ಆದರ್ಶ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ ಎಸ್ ಕಾಳಪ್ಪನವರ ಆಗಮಿಸಿದ್ದರು. ವಿಶೇಷ ಉಪನ್ಯಾಸಕರಾಗಿ ಜೆ ಎಸ್ ಕಾಂಗ್ರೇಶಕೊಪ್ಪ ಆಗಮಿಸಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಿದರು.
ನಿರೂಪಣೆಯನ್ನು ಶಾಲೆಯ ಶಿಕ್ಷಕ ಐ ಬಿ ನೈಸರ್ಗಿ ನಡೆಸಿಕೊಟ್ಟರು. ಎಸ್‌ಡಿಎಂಸಿ ಉಪಾಧ್ಯಕ್ಷ ಸುಕನ್ಯಾ ಬೀಳಗಿ ಮತ್ತು ಶಾಲೆಯ ಎಲ್ಲ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 