ಕಾನೂನು ಅರಿವು ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಕಾನೂನು ಸೇವೆಗಳ ಕುರಿತು ಮಾಹಿತಿ
Legal Awareness Program: Information for Students on Legal Services
ಲೋಕದರ್ಶನ ವರದಿ
ಧಾರವಾಡ 03 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎನ್.ವಿ. ವಿಜಯ್ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಕೀಲ ವೃತ್ತಿಯ ಮಹತ್ವ, ವೃತ್ತಿಪರ ಮೌಲ್ಯಗಳು ಹಾಗೂ ಸಮಾಜ ಸೇವೆಯ ಜವಾಬ್ದಾರಿಗಳ ಕುರಿತು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಅವರು ಪ್ರಾಧಿಕಾರದ ಉದ್ದೇಶಗಳು, ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಅಗತ್ಯ, ಉಚಿತ ಕಾನೂನು ನೆರವು ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷ ವಿ.ಬಿ. ಯಳ್ಳಳ್ಳಿ ವಹಿಸಿದ್ದರು. ಸಂಸ್ಥೆಯ ಕಾರ್ಯಾಧ್ಯಕ್ಷ ಆರ್.ಯು. ಬೆಳ್ಳಕ್ಕಿ, ಗೌರವ ಕಾರ್ಯದರ್ಶಿ ಸಿ.ಬಿ. ಮಟ್ಟಿಮನಿ ಹಾಗೂ ಜಂಟಿ ಕಾರ್ಯದರ್ಶಿ ಎಸ್.ಎಂ. ಅಗಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಧ್ಯಕ್ಷೀಯ ಭಾಷಣದಲ್ಲಿ ವಿ.ಬಿ. ಯಳ್ಳಳ್ಳಿ ಅವರು ವಿದ್ಯಾರ್ಥಿಗಳು ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳುವ ಮಹತ್ವವನ್ನು ವಿವರಿಸಿದರು. ಆರ್.ಯು. ಬೆಳ್ಳಕ್ಕಿ ಅವರು ಕಾನೂನು ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಲಭ್ಯವಿರುವ ಅವಕಾಶಗಳ ಕುರಿತು ಮಾಹಿತಿ ನೀಡಿದರು.
ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಸವಿತಾ ಪಾಟೀಲ ಸ್ವಾಗತಿಸಿದರು. ಡಾ. ಎಸ್.ಎಸ್. ಗಾಳಿಮಠ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ರಾಠೋಡ ವಂದಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 