ಗದಗ 06: ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿನ ಬಂಧಿಗಳ ಕುಟುಂಬದ ಸದಸ್ಯರುಗಳಿಗೆ ಕಾನೂನು ನೆರವು ಹಾಗೂ ಕೇಂದ್ರ ಹಾಗೂ ರಾಜ್ಯ ಸಕರ್ಾರಗಳ ಜನಕಲ್ಯಾಣ ಯೋಜನೆಗಳ ಮಾಹಿತಿ ನೀಡುವ ಕಾರ್ಯಕ್ರಮವನ್ನು ಗದಗ ಜಿಲ್ಲಾ ಕಾರಗೃಹದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಎಸ್.ಜಿ. ಸಲಗರೆಯವರು ಮಾತನಾಡಿ ಕಾರಾಗೃಹದಲ್ಲಿನ ಬಂಧಿಗಳ ಕುಟುಂಬದ ಸದಸ್ಯರುಗಳಿಗೆ ಸಕರ್ಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವ ಬಗ್ಗೆ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿಚಾರಣಾಧೀನ ಬಂಧಿಗಳ ಮಕ್ಕಳಿಗೆ ಶಿಷ್ಯ ವೇತನ, ವಸತಿಶಾಲೆಗಳ ಸೌಲಭ್ಯ, ಆಧಾರ ಕಾರ್ಡ, ರೇಷನ್ ಕಾರ್ಡನಲ್ಲಿ ಹೆಸರು ಸೇರ್ಪಡೆ ಮತ್ತು ಕುಟುಂಬದ ಸದಸ್ಯರು ಯಾವುದಾದರೂ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಲ್ಲಿ ಮಾಹಿತಿ ನೀಡಿದಲ್ಲಿ ಸೌಲಭ್ಯ ಒದಗಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕ್ರಮಕೈಗೊಳ್ಳಲಿದ್ದು, ರಾಜ್ಯ ಹಾಗೂ ಕೇಂದ್ರ ಸಕರ್ಾರದ ಜಾರಿಯಲ್ಲಿರುವ ಹಲವಾರು ಯೋಜನೆಗಳ ಬಗ್ಗೆ ಅರಿವು ಹೊಂದಿ ಸೌಲಭ್ಯ ಪಡೆದುಕೊಳ್ಳಲು ಸೂಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರಾಗೃಹದ ಅಧೀಕ್ಷರಾದ ನಾಗರತ್ನಮ್ಮ ವಾಯ್.ಡಿ ವಹಿಸಿದ್ದರು. ಪ್ಯಾನಲ್ ವಕೀಲರಾದ ವಿ.ವಿ.ಪಾಟೀಲ್ ಹಾಗೂ ವಾಯ್.ಡಿ.ತಳವಾರ ಅವರು ರಾಜ್ಯ ಹಾಗೂ ಕೇಂದ್ರ ಸಕರ್ಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಂಧಿಗಳ ಕುಟುಂಬದ ಸದಸ್ಯರು ಕೋರಿದ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಾರಂಭದಲ್ಲಿ ಸಿದ್ದರಾಮಣ್ಣವರ ಪ್ರಾರ್ಥಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶಿರಸ್ತೆದಾರರಾದ ಬಿ.ಎಮ್.ಕುಕನೂರ ಅವರು ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.