ಧಾರವಾಡ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
Legal awareness-assistance program at Dharwad District Court Hall
ಧಾರವಾಡ 27: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಭಿಯೋಜನೆ ಇಲಾಖೆ, ಧಾರವಾಡ ವಕೀಲರ ಸಂಘ ಇವರ ಸಹಯೋಗದೊಂದಿಗೆ ನಿನ್ನೆ (ನ.26) ಧಾರವಾಡ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವದ ಲಿಖಿತ ಸಂವಿಧಾನವಾಗಿದೆ. ಸಂವಿಧಾನದ ಸಂಪೂರ್ಣ ಅರ್ಥ ಅದರ ಪೀಠಿಕೆಯಲ್ಲಿ ಅಡಗಿದೆ. ಆದ್ದರಿಂದ, ಭಾರತದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ ಪೀಠಿಕೆಯನ್ನು ಅರಿತಿರಬೇಕು. ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳೊಂದಿಗೆ ಕರ್ತವ್ಯವನ್ನು ಪಾಲಿಸುವ ಮನೋಭಾವನೆ ಎಲ್ಲರಲ್ಲಿಯೂ ಮೂಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುವರ್ಣಾ ಕೆ. ಮಿರ್ಜಿ ಅವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಾಗರಾಜಪ್ಪ ಎ.ಕೆ., ರಾಜಕುಮಾರ ಸಿ, ಜರೀನಾ, ಪೂರ್ಣಿಮಾ ಭಂಡಾರಕರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್ ದೊಡ್ಡಮನಿ, ಧಾರವಾಡ ವಕೀಲರ ಸಂಘದ ಅಧ್ಯಕ್ಷ ಅಶೋಕ ವ್ಹಿ. ಏಣಗಿ, ಸರ್ಕಾರಿ ಅಭಿಯೋಜಕಿ ಶೈಲಾ ಅಂಗಡಿ ಅವರು ಭಾಗವಹಿಸಿದ್ದರು.
ನಗರದ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು, ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ, ಅಭಿಯೋಜನೆ ಇಲಾಖೆಯ ಸಿಬ್ಬಂದಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 