ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ
Legal awareness program as part of National Consumer Day
ಹಾವೇರಿ 25 : ಮನುಷ್ಯ ಒಂದಲ್ಲಾ ಒಂದು ರೀತಿಯ ಗ್ರಾಹಕರೆ, ನಮ್ಮ ಹಕ್ಕುಗಳಿಗೆ ಚ್ಯುತಿ ಬಂದರೆ, ಅಥವಾ ಯಾವುದೇ ವಸ್ತು ಖರೀದಿಸಿದ ಸಂದರ್ಭದಲ್ಲಿ ಮೋಸ ಹೋದರೆ, ಗ್ರಾಹಕರ ಮಾಹಿತಿ ಕಾಯ್ದೆಯಲ್ಲಿ ನ್ಯಾಯ ಪಡೆಯಕೊಳ್ಳಬಹುದು ಎಂದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲಜಾ ಅವರು ಹೇಳಿದರು.ನಗರದ ಡಾ ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬುದವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ವಿವಿಧ ಸಂಸ್ಥೆ, ಆಯೋಗ ಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಿಜಿಟಲ್ ನ್ಯಾಯಾಂಗದ ಮೂಲಕ ಪ್ರಕರಣಗಳ ತ್ವರಿತ ಮತ್ತು ಸಮರ್ಥ ವಿಲೆವಾರಿ ಈ ವರ್ಷದ ಘೋಷ ವಾಕ್ಯವಾಗಿದ್ದು, ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಅವರ ವ್ಯಾಜ್ಯಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದಾಗಿ ತಿಳಿಸಿದರು.ಗ್ರಾಹಕ ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸಿ ಅದರಿಂದ ಮೋಸ ಹೋದರೆ ನ್ಯಾಯ ಪಡೆಯಲು ಸರ್ಕಾರ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ ಅದುವೇ ಇ -ಜಾಗೃತಿ ಪ್ರೋಟಲ್. ಈ ಪೋರ್ಟಲ್ ನಲ್ಲಿ ಗ್ರಾಹಕರು ತಮ್ಮ ದೂರುಗಳನ್ನು ನೋಂದಾಯಿಸಿಕೊಂಡು ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.
ಬಳಿಕ ಸಹಾಯಕ ಕಾನೂನು ನೆರವು ಅಬಿರಕ್ಷಣಾ ವಕೀಲರಾದ ಎನ್. ಎನ್. ಡಿಳ್ಳೆಪ್ಪನವರ ರವರು ಕಾನೂನು ಅರಿವು ಕಾರ್ಯಕ್ರಮದ ಕುರಿತು ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷರಾದ ಈಶ್ವರ್ಪ ಬಿ. ಎಸ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಹೆಚ್. ಸಿ. ಸಿದ್ದನಗೌಡ್ರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ, ಮಂಜುನಾಥ ಡಿ. ಜೆ, ಚೈತನ್ಯ ರೂರಲ್ ಡೆವಲಪ್ ಮೆಂಟ್ ಸೊಸೈಟಿ ನಿರ್ದೇಶಕರಾದ ಎಸ್. ಹೆಚ್. ಮಜೀದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಆಂಜನೇಯ ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 