ಕಾನೂನು ತಿಳುವಳಿಕೆ ಎಲ್ಲರಿಗೂ ಇರಲಿ: ನ್ಯಾ. ಅನಿತಾ

ಲೋಕದರ್ಶನ ವರದಿ

ಗಂಗಾವತಿ 27: ಇಂದಿನ ದಿನಗಳಲ್ಲಿ ಕಾನೂನು ಕುರಿತು ತಿಳುವಳಿಕೆ ಎಲ್ಲರಿಗೂ ಅಗತ್ಯವಾಗಿ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ. ಅನಿತಾ ತಿಳಿಸಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶಕ್ಕೆ ಡಾ. ಬಾಬಾಸಾಹೇಬ ಅಂಬೇಡಕರರು ಸಂವಿಧಾನವನ್ನು ನೀಡಿದ್ದಾರೆ. ನಮ್ಮ ಸಂವಿಧಾನದಂತೆ ನಾವುಗಳು ನಡೆಯುವದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಕಾನೂನು ದೊಡ್ಡವರು ಸಣ್ಣವರು ಎಂದು ನೋಡುವದಿಲ್ಲ. ಎಲ್ಲರು ಕಾನೂನು ವ್ಯಾಪ್ತಿಯಲ್ಲಿ ನಡೆಯಬೇಕಾಗಿದೆ ಎಂದು ಹೇಳಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಚ್.ಡಿ.ಅನಿತಾ ಮಾತನಾಡಿದರು. ವಕೀಲರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.