ಧಾರವಾಡ 31: ರಾಜ್ಯ ಹಾಗೂ ಕೇಂದ್ರ ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ವರ್ಷ ನೂರಾರು ಕೋಟಿ ಅನುದಾನ ಬಿಡುಗಡೆಗೊಳಿಸುತ್ತಿದೆ. ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ದೊರೆತು, ಯಾರೊಬ್ಬರೂ ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಧಾರವಾಡ ಗ್ರಾಮೀಣ ಬಿಜೆಪಿ ಶಾಸಕ ಅಮೃತ ದೇಸಾಯಿ ಹೇಳಿದರು.
ಅವರು ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಶಾಲೆಗಳಿಗೆ ಯಾವುದೇ ಮೂಲಭೂತ ಸೌಕರ್ಯ ಕೊರತೆಯಿದ್ದರೆ, ಅದನ್ನು ನನ್ನ ಗಮನಕ್ಕೆ ತಂದರೆ ಸರಿ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಆದರೆ ವಿದ್ಯಾಥರ್ಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಗುರುತರ ಜವಾಬ್ದಾರಿ ಶಿಕ್ಷಕ ಸಮುದಾಯದ ಮೇಲಿದೆ. ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋದರೆ ಶೇ. 100ರಷ್ಟು ಫಲಿತಾಂಶ ಸಾಧಿಸಲು ಸಾಧ್ಯವಾಗುತ್ತದೆ. ಅಲ್ಲದೆ, ಮಕ್ಕಳು ಕೂಡ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದರು.
ಇಂದು ಸರಕಾರ ಮಕ್ಕಳಿಗಾಗಿ ಸಮವಸ್ತ, ಬಿಸಿ ಊಟ, ಹಾಲು, ಶ್ಯೂಸ್ ಸೇರಿದಂತೆ ಶಿಷ್ಯ ವೇತನ ಹೀಗೆ ಹತ್ತು ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಅದರ ಸದುಪಯೋಗ ಪಡೆದು ಧಾರವಾಡ ತಾಲೂಕಿನ ಕೀತರ್ಿ ಪತಾಕೆಯನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಚ್ಚಿಸಬೇಕು ಎಂದು ಕರೆ ನೀಡಿದರು.
ಬಳಿಕ ಬೇಲೂರು ಗ್ರಾಮದ ಸಿ ಸಿ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು.
ತಾಪಂ ಸದಸ್ಯರಾದ ಮಹದೇವ ದಂಡಿನ, ಬಸಯ್ಯ ಕಳ್ಳಿಮಠ, ಸಂತೋಷ ಬಡವಣ್ಣವರ, ಬಸವರಾಜ ಚಿಕ್ಕಣ್ಣವರ, ಕೋಟೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಮಠಪತಿ ಸೇರಿದಂತೆ ಗ್ರಾಮ ಗುರು ಹಿರಿಯರು ಉಪಸ್ಥಿತರಿದ್ದರು.