ರೈಲು ಬಡಿದು ಚಿರತೆ ಸಾವು
Leopard dies after being hit by train
ರೈಲು ಬಡಿದು ಚಿರತೆ ಸಾವು
ಕಾರವಾರ, 10 ; ರೈಲು ಬಡಿದು ಚಿರತೆ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಅಮದಳ್ಳಿ ಸಮೀಪದ ಜಡಿಗದ್ದೆ ಗ್ರಾಮದ ಪಕ್ಕಹಾದು ಹೋಗಿರುವ ಕೊಂಕಣ ರೈಲ್ವೆ ಮಾರ್ಗದಲ್ಲಿ ಈ ಘಟನೆ ನಡೆದಿದೆ.
ಶುಕ್ರವಾರ ತಡರಾತ್ರಿ ರೈಲು ಚಿರತೆಗೆ ಬಡಿದಿರಬೇಕೆಂದು ಶಂಕಿಸಲಾಗಿದೆ.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಚಿರತೆರೈಲು ಹಳಿಯ ಪಕ್ಕಬಿದ್ದಿತ್ತು ಎನ್ನಲಾಗಿದೆ.
ಮೃತ ಚಿರತೆ, ಗಂಡು ಚಿರತೆಯಾಗಿದೆ. ತೋಡೂರು ಜಡಿಗದ್ದಾ ಗ್ರಾಮಗಳು ಅರಣ್ಯದಂಚಿನ ಪ್ರದೇಶದಲ್ಲಿದ್ದು, ಆಹಾರ ಅರಸಿ ನಾಯಿಗಳನ್ನು ಬೇಟೆಯಾಡಲು ಚಿರತೆಗಳು ಗ್ರಾಮಗಳಿಗೆ ಪದೇ ಪದೇ ಬರುವುದು ಸಾಮಾನ್ಯ. ಈಚೆಗೆ ಚಿರತೆ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು ಎಂದು ಜಡಿಗದ್ದೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಚಿರತೆಯ ಶವವನ್ನು ನೋಡಿದ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣವೇ ಆಗಮಿಸಿದ ಅರಣ್ಯಾಧಿಕಾರಿಗಳು, ಪೊಲೀಸ್ ಮತ್ತು ಗ್ರಾಮ ಪಂಚಾಯತ ಸಿಬ್ಬಂದಿ ಸಮ್ಮುಖದಲ್ಲಿ
ಪಶು ವೈದ್ಯಾಧಿಕಾರಿ ಡಾ. ಓಂ ಪ್ರಕಾಶ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಜೆಎಂಎಫ್ ಸಿ ನ್ಯಾಯಾಧೀಶರ ಅನುಮತಿ ಪಡೆದು ಅರಣ್ಯ ಇಲಾಖೆ ವತಿಯಿಂದ ಚಿರತೆಯ ಸಂಸ್ಕಾರ ಮಾಡಲಾಯಿತು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 