ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ : ಧನಂಜಯ
ಶಿಗ್ಗಾವಿ 22 : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ. ಅಂದಿನ ದಿನ ತಾಲೂಕಾಡಳಿತದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿ ಮಾಡಬೇಕೆಂದು ತಹಸೀಲ್ದಾರ ಧನಂಜಯ ಎಂ ಹೇಳಿದರು. ಪಟ್ಟಣದ ತಹಶಿಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗಣರಾಜ್ಯೋತ್ಸವ ನಿಮಿತ್ತ ಜ.25 ಮತ್ತು 26 ರಂದು ಸಂಘ ಸಂಸ್ಥೆಗಳು, ಸರಕಾರಿ ಕಚೇರಿಗಳು ಎಲ್ಲಾ ಮಹನಿಯರ ಮೂರ್ತಿಗಳ ದೀಪಾಲಂಕಾರ ಮಾಡುವುದು. ಜೊತೆಗೆ ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿರುವ ಎಲ್ಲ ಜವಾಬ್ಧಾರಿ ಕೆಲಸಗಳನ್ನು ಅಚ್ಚು ಕಟ್ಟಾಗಿ ನಿಭಾಯಿಸಿಬೇಕು. ಜ.26 ರ ಬೆಳಿಗ್ಗೆ 8 ಗಂಟೆಗೆ ಸರಕಾರಿ, ಅರೆ ಸರಕಾರಿ, ವಿವಿಧ ಶಾಲಾ ಕಾಲೇಜು ಮತ್ತು ಸಂಘ-ಸಂಸ್ಥೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ನಂತರ ಪಟ್ಟಣದ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ತಾಲೂಕು ಕ್ರೀಡಾಂಗಣದಲ್ಲಿ 8.30 ರೊಳಗೆ ಹಾಜರಾಗಿ ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಈ ಸಂದರಭದಲ್ಲಿ ಕ್ಷೇತ್ರ ಶಿಕ್ಷಾಧಿಕಾರಿ ಎಂ ಬಿ ಅಂಬಿಗೇರ, ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ ಆರ್, ಸಹಾಯಕ ಕೃಷಿ ಅಧಕಾರಿ ಕೊಟ್ರೇಶ ಗೆಜಲಿ, ಪಶು ವೈದ್ಯಾಧಿಕಾರಿ ರಾಜೇಂದ್ರ ಅರಲೇಶ್ವರ, ನೌಕರರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ, ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಮ್ಯಾಗೇರಿ, ಕೆ ಎಸ್ ಆರ್ ಪಿ 10 ನೇ ಪಡೆಯ ಪೋಲಿಸ್ ಇನ್ಸ್ಪೆಕ್ಟರ್ ರಾಜಶೇಖರ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಂದುಧರ ಮುತ್ತಳ್ಳಿ, ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು. ರೈತ ಸಂಘದ ಮುಖಂಡರು. ಪೋಲಿಸ ಇಲಾಖೆ ಅಧಿಕಾರಿಗಳು. ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಸಬೆಯಲ್ಲಿ ಪಾಲ್ಗೊಂಡಿದ್ದರು.