ಲೋಕದರ್ಶನ ವರದಿ
ಶಿರಹಟ್ಟಿ 28: ತಾಲೂಕು ಮಟ್ಟದ ಶಿಕ್ಷಕರ ದಿನಾಚಣೆಯನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಅವರು ಪಟ್ಟಣದ ತಾಲೂಕು ಪಂಚಾಯತಿಯ ಸಾಮಥ್ರ್ಯ ಸೌಧದಲ್ಲಿ ಮಂಗಳವಾರ ಶಿಕ್ಷಕ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಂಡ ತಾಲೂಕಿನ ಶಿಕ್ಷಕರ ವೃಂದ ತಾಲೂಕಿನ ವಡವಿ-ಹೊಸೂರ ಗ್ರಾಮದಲ್ಲಿ 2019-20ನೇ ಸಾಲಿನ ಶಿಕ್ಷಕರ ದಿನಾಚಾರಣೆಯನ್ನು ಆಚರಿಸಲಾಗುತ್ತಿದ್ದು, ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಸೇರಿದಂತ ಎಲ್ಲರೂ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕಾರ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಅಲ್ಲದೇ ತಾಲೂಕು ಮಟ್ಟದ ಶಿಕ್ಷಕರ ದಿನಾಚಾರಣೆಯನ್ನು ಅತ್ಯಂತ ಸಂಭ್ರಮದಿಂದ ನಡೆಸಲು ಸಾರ್ವಜನಿಕರು, ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಸರ್ವರು ಪಾಲ್ಗೋಳ್ಳುವುದರ ಮೂಲಕ ಶಿಕ್ಷಕರ ವೃಂದಕ್ಕ ಗೌರವ ಸಲ್ಲಿಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ, ಲಕ್ಷ್ಮೇಶ್ವರ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ, ತಾಪಂ ಅಧ್ಯಕ್ಷೆ ಸುಶೀಲವ್ವ ಥಾವರೆಪ್ಪ ಲಮಾಣಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ತಿಪ್ಪಣ್ಣ ಕೊಂಚಿಗೇರಿ, ತಾಪಂ ಕಾರ್ಯನಿವರ್ಾಹಕ ಅಧಿಕಾರಿ ರಾಹುಲ್ ಕಾಂಬಳೆ, ರಾಜ್ಯ ಸರಕಾರಿ ನೌಕರಿ ಸಂಘದ ತಾಲೂಕ ಅಧ್ಯಕ್ಷ ಶರಣಬಸವನಗೌಡ ಪಾಟೀಲ್, ಸದಸ್ಯ ಗಿರೀಶ ಕೊಡಬಾಳ ಸೇರಿದಂತೆ ಹಲವು ಶಿಕ್ಷಕರು ಉಪಸ್ಥಿತರಿದ್ದರು.