ಖರ್ಚು ವೆಚ್ಚಗಳ ನಿರ್ವಹಣೆ ಪಾರದರ್ಶಕವಾಗಿರಲಿ: ದೀಪಾ ಚೋಳನ್

ಧಾರವಾಡ 26: ಬರುವ ಜನವರಿ ಕೊನೆಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಧಾರವಾಡಲ್ಲಿ ನಡೆಯಲಿರುವ ರಾಜ್ಯ ಸಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಲು ವಿವಿಧ ಉಪ ಸಮಿತಿಗಳ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಎಲ್ಲ ಖರ್ಚು  ವೆಚ್ಚಗಳು ಪಾರದರ್ಶಕವಾಗಿರಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಕ್ರೀಡಾಕೂಟ ಆಯೋಜನೆಗಾಗಿ ವಿವಿಧ ಉಪಸಮಿತಿಗಳ ರಚನೆ ಕುರಿತು ಇಂದು (ಡಿ.26) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 

ಸ್ವಾಗತ, ಸಾರಿಗೆ, ಆಹಾರ, ಕ್ರೀಡೆಗಳ ಆಯೋಜನೆಗೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುವುದು ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪಧರ್ೆಗಳನ್ನು ಆಯೋಜಿಸಲು ಜಿಲ್ಲಾ ಕ್ರೀಡಾಂಗಣ, ಕರ್ನಾ ಟಕ ಕಾಲೇಜು, ಜೆಎಸ್ಎಸ್ ಕಾಲೇಜು,  ಕೃಷಿವಿಶ್ವವಿದ್ಯಾಲಯದ ಮೈದಾನಗಳನ್ನು ಹಿರಿಯ ಅಧಿಕಾರಿಗಳೊಂದಿಗೆ ಸಂಘದ ಸದಸ್ಯರು ಭೇಟಿ ನೀಡಿ ಅಂತಿಮಗೊಳಿಸಲು ಹೇಳಿದರು.ಕ್ರೀಡಾಕೂಟದ ಅಂಗವಾಗಿ ಹೊರತರಲು ಉದ್ದೇಶಿಸಿರುವ ಸ್ಮರಣ ಸಂಚಿಕೆಗೆ ಹಿರಿಯ ಮತ್ತು ಅನುಭವಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕೆಂದು ಸೂಚಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮಹೇಶಕುಮಾರ್, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ, ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿನಿದರ್ೆಶಕ ಸದಾಶಿವ ಮರ್ಜಿ , ಜಿಲ್ಲಾ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಅ.ಭಾ.ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಅಧ್ಯಕ್ಷ ಬಸವರಾಜ ಗುರಿಕಾರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇ ಶಕ ಶಾಕೀರ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.