ಸರ್ಕಾರಿ ಶಾಲೆಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ : ಕರಬಸಪ್ಪ ಆನ್ವೇರಿ
Let children in government schools receive quality education: Karabasappa Anveri
ಬ್ಯಾಡಗಿ 2: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಸರ್ಕಾರ ಹಾಗೂ ಶಿಕ್ಷಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಸ್ಡಿಎಂಸಿ ಸದಸ್ಯ ಕರಬಸಪ್ಪ ಆನವೇರಿ ಹೇಳಿದರು.
ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭವಾದ ಎಲ್ಕೆಜಿ ತರಗತಿಯ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರ ಶಿಕ್ಷಣ ಇಲಾಖೆಗೆ ಸಾಕಷ್ಟು ಅನುದಾನ ನೀಡುತ್ತಿದ್ದು, ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಖಾಸಗಿ ಶಾಲೆಗಳಷ್ಟೇ ಉತ್ತಮ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಎಲ್ಕೆಜಿ ತರಗತಿಗಳಿಗೆ ಅಗತ್ಯ ಪಠ್ಯಪುಸ್ತಕ ಹಾಗೂ ಇತರ ಮೂಲಭೂತ ಸೌಲಭ್ಯಗಳನ್ನು ಶೀಘ್ರ ಒದಗಿಸಬೇಕು. ಆರಂಭಿಕ ಹಂತದಲ್ಲಿಯೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ಅವರ ಭವಿಷ್ಯ ಉಜ್ವಲವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಕ್ಕಿಯಲ್ಲಿ ‘ಓಂ’ ಬರೆಯಿಸುವ ಮೂಲಕ ಅಕ್ಷರಾಭ್ಯಾಸ ನೆರವೇರಿಸಲಾಯಿತು. ಈ ಶೈಕ್ಷಣಿಕ ವರ್ಷದಲ್ಲಿ ಎಲ್ಕೆಜಿ ತರಗತಿಗೆ 18 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ಪ್ರಶಾಂತ ಹೊಸಮನಿ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಪಾಲಕರು ಮತ್ತು ಶಿಕ್ಷಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 