ಸಂವಿಧಾನವನ್ನು ಪ್ರತಿಯೊಬ್ಬರೂ ಪಾಲಿಸೋಣ: ಡಾ. ದೀಲೀಶ್ ಶಶಿ
Let everyone follow the Constitution: Dr. Dilish Shashi
ಕಾರವಾರ 26: ಸಂವಿಧಾನವು ಪವಿತ್ರ ಗ್ರಂಥವಾದರೆ ಅದರ ಪೀಠಿಕೆಯು ಪ್ರತಿನಿತ್ಯ ಓದುವ ಪಾರ್ಥನೆ ಇದ್ದಂತೆ, ಪ್ರತಿಯೊಬ್ಬರು ಸಂವಿಧಾನದ ಮಹತ್ವವನ್ನು ಅರಿತುಕೊಂಡು ಪಾಲಿಸುವ ಮೂಲಕ ಉತ್ತಮ ದೇಶವನ್ನು ನಿರ್ಮಿಸೋಣ ಎಂದು ಜಿಲ್ಲಾ ಪಂಚಾಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ದೀಲೀಶ್ ಶಶಿ ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಡಾ. ಬಿಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಅವುಗಳಲ್ಲಿನ ಉತ್ತಮ ಸಂಗತಿಗಳನ್ನು ಹೆಕ್ಕಿ ತೆಗೆದು ಭಾರತದ ಸಂವಿಧಾನವನ್ನು ರಚಿಸಲಾಗಿದೆ. ದೇಶದ ನಿಯಮಗಳು, ಕಾಯ್ದೆ ಎಲ್ಲವೂ ಸಂವಿಧಾನದ ಅಡಿಯಲ್ಲಿಯೇ ಇದೆ. ಹೀಗಾಗಿ ಸಂವಿಧಾನವು ಪವಿತ್ರ ಗ್ರಂಥವಾದರೇ ಅದರ ಪೀಠಿಕೆಯು ಮುಖ್ಯ ಪ್ರಾರ್ಥನೆ ಇದ್ದಂತೆ , ಅದನ್ನು ಪ್ರತಿಯೊಬ್ಬರು ಪ್ರತಿನಿತ್ಯ ಓದಿ ಜೀವನದಲ್ಲಿ ಅಳವಡಿಸಿಕೊಂಡು ಪಾಲನೇ ಮಾಡಿದಾಗ ಮಾತ್ರ ಉತ್ತಮ ದೇಶ ನಿರ್ಮಿಸಲು ಸಾಧ್ಯ. ಸಂವಿಧಾನ ಪಾಲನೆಯ ಮೇಲೆಯೇ ನಮ್ಮ ದೇಶ ನಿಂತಿದೆ. ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಉತ್ತಮ ಸಂವಿಧಾನವಾಗಿದ್ದು, ಪಾಲಕರು ಮಕ್ಕಳಿಗೆ ಈ ಬಗ್ಗೆ ಹೇಳಿ ಕೊಡುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ಜಾತಿ, ಧರ್ಮ ಇರುವ ನಮ್ಮ ದೇಶದಲ್ಲಿ ಎಲ್ಲರನ್ನು ಶಾಂತಿಯುತವಾಗಿ ಕಾಪಾಡಲು ಸಂವಿಧಾನವೇ ಕಾರಣ. ಅಂತಹ ಸಂವಿಧಾನ ನೀಡಿದ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಕೇಂದ್ರ ಸ್ಥಾನದಲ್ಲಿಟ್ಟು ಪೂಜಿಸಬೇಕು. ಸಂವಿಧಾನದ ಪೀಠಿಕೆ ಕೇವಲ ಕಾಗದಕ್ಕೆ ಸಿಮಿತವಾಗದೇ ಪ್ರತಿನಿತ್ಯದ ಪ್ರಾರ್ಥನೆಯಾಗಿ ಪರಿವರ್ತನೆಯಾಗಬೇಕು. ಸಂವಿಧಾನಕ್ಕೆ ಪೂರಕವಾಗಿ ನಮ್ಮ ವಿಚಾರಧಾರೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಅಲ್ಲಾಭಕ್ಷ ಮಾತನಾಡಿ, ಸಂವಿಧಾನದ ಪೀಠಿಕೆ ಓದಿದರೆ ಸಾಕು ಅದರಲ್ಲೇ ಸಂಪೂರ್ಣ ಸಂವಿಧಾನ ಸರಾಂಶ ಅಡಕವಾಗಿದೆ. ಅದು ಎಲ್ಲಾ ಮೌಲ್ಯಗಳನ್ನು ಪ್ರತಿನಿಧಿಸುತ್ತದೆ. ನಾವೆಲ್ಲರೂ ಜಾತಿ ಧರ್ಮ ಭೇಧವಿಲ್ಲದೇ ಎಲ್ಲರನ್ನು ಗೌರವಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ನಾಗರಾಜ ಹೆಗಡೆ ಅಪಗಾಲ ಅವರು ಸಂವಿಧಾನದ ಬಗ್ಗೆ ವಿಶೇಷ ಉಪನ್ಯಾಸ ನೀಡಿ, ಸಂವಿಧಾನ ಕೇಲವ ಪರೀಕ್ಷೆಗೆ, ಅಂಕಗಳಿಗೆ ಸೀಮಿತವಾಗಬಾದರು. ವಿದ್ಯಾರ್ಥಿಗಳು ಸಂವಿಧಾನವನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ನಾಗರೀಕರ ಮೊದಲ ಕರ್ತವ್ಯವೇ ಸಂವಿಧಾನವನ್ನು ಪಾಲಿಸುವುದು ಎಂದರು.
ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಸ್ವೀಕರಿಸಲಾಯಿತು. ಅಂತರಾಷಿೊಥಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಮಾಜ ಕಲ್ಯಾಣ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೇಯಲ್ಲಿ ವಿಜೇತರಿಗೆ ಪ್ರಶಸ್ತಿ ನೀಡಲಾಯಿತು ಹಾಗೂ ಸಂಗೀತ ಕಾರ್ಯಕ್ರಮವು ನಡೆಯಿತು.
ಜಿ.ಪಂ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ ವೈ.ಕೆ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸತೀಶ ನಾಯ್ಕ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕಿ ನಳಿನಿ ಪಟಗಾರ ಸ್ವಾಗತಿಸಿದರು. ಅಣಶಿ ಸರ್ಕಾರಿ ಪ್ರೌಡ ಶಾಲೆಯ ಅಧ್ಯಾಪಕ ವಿಷ್ಣು ಪಟಗಾರ ನಿರೂಪಿಸಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 