ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
Let the plan report be a compass for the comprehensive development of the district: District in-cha
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತದಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು (ಅ.27) ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆ ಜರುಗಿಸಿ, ಅಧ್ಯಕ್ಷತೆವಹಿಸಿ ಮಾತನಾಡಿದರು.
ಸರಕಾರವು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶವಾಗುವಂತೆ ಅಗತ್ಯ ಅನುದಾನ ನೀಡಲು ಕ್ರಮವಹಿಸಲಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಗತ್ಯ ಕಾಮಗಾರಿ, ಕಾರ್ಯಕ್ರಮಗಳನ್ನು ಯೋಜನಾ ವರದಿಯಲ್ಲಿ ಸೇರಿಸಬೇಕು. ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮುನ್ನೊಟವಾಗಬೇಕು ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.
ಗ್ರಾಮೀಣ ಅಭಿವೃದ್ಧಿಗೆ ಮತ್ತು ನಗರ ಅಭಿವೃದ್ಧಿಗೆ ವಿಸೃತ ವರದಿ ರೂಪಿಸಬೇಕು. ಸ್ಥಳೀಯ ಸಂಸ್ಥೆಗಳಿಂದ ನಿಯಮಾನುಸಾರ ಬೇಡಿಕೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. ಮೂಲಭೂತ ಸೌಕರ್ಯಗಳ ಹೆಚ್ಚಳ ಜೊತೆಗೆ ಜನರ ಕಲ್ಯಾಣ ಕಾರ್ಯಕ್ರಮಗಳ ಸೆರೆ್ಡ ಮಾಡಿ ಉತ್ತಮ ಯೋಜನೆ ರೂಪಿಸಬೇಕು. ಜನರ ಜೀವನಮಟ್ಟ ಸುಧಾರಣೆಗೆ ಹಾಗೂ ಆರ್ಥಿಕ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ಅಭಿವೃದ್ಧಿ ಯೋಜನಾ ವರದಿಯಲ್ಲಿ ಸೇರಿಸಬೇಕು ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.
ವಿಧಾನ ಪರಿಷತ್ತ ಸರಕಾರದ ಮುಖ್ಯ ಸಚೇತಕ ಸಲೀಂ ಅಹಮ್ಮದ ಅವರು ಮಾತನಾಡಿ, ಜಿಲ್ಲೆಯ ಸಮಗ್ರ ವರದಿಗೆ ಅಧಿಕಾರಿಗಳು ಅಗತ್ಯ ಯೋಜನಾ ವರದಿ ರೂಪಿಸಬೇಕು. ಎಲ್ಲ ಸಮುದಾಯಗಳ ಪ್ರಗತಿಗೆ ಪೂರಕವಾಗಿರಬೇಕು ಎಂದು ಅವರು ಹೇಳಿದರು. ವಿಧಾನ ಪರಿಷತ್ತ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ ಅವರು ಮಾತನಾಡಿ, ಎಸ್.ಎಸ್.ಟಿ ಗ್ರಾಮಸಭೆ ಆಗಬೇಕು. ಜಿಲ್ಲೆಯ ಎಲ್ಲ ಎಸ್.ಸಿ., ಎಸ್.ಟಿ. ಸಮುದಾಯ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ರಾಜ್ಯದಲ್ಲಿ ಮೊದಲ ಬಾರಿಗೆ, ನಮ್ಮ ಜಿಲ್ಲೆಯಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿ ಜರುಗುತ್ತಿದೆ. ಇಂದಿನ ಸಭೆ ಪೂರ್ವಭಾವಿ ಸಭೆ ಆಗಿದ್ದು, ಎಲ್ಲ ಸಮುದಾಯ, ಗ್ರಾಮ ಮತ್ತು ನಗರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಯನ್ನು ರೂಪಿಸಲಾಗುತ್ತದೆ. ಮುಂದಿನ ವಾರ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಯೋಜನಾ ವರದಿ ತಯ್ಯಾರಿಸುವ ಕುರಿತು ಕಾರ್ಯಾಗಾರ ಮಾಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಎಂ.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ತ ಸದಸ್ಯ ಪ್ರದೀಪ ಶೆಟ್ಟರ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ವೇದಿಕೆಯಲ್ಲಿದ್ದರು.
ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಮಾರುತಿ ತಳವಾರ ಅವರು ಜಿಲ್ಲಾ ಯೋಜನೆ ತಯ್ಯಾರಿಕೆ ಕುರಿತು ಸಭೆಯಲ್ಲಿ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಯೋಜನಾ ಸಮಿತಿ ಸದಸಸ್ಯರು, ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 