ಸಾರ್ವಜನಿಕರ ಅಪೇಕ್ಷೆ ಗಳು ಯೋಜನೆಗಳಲ್ಲಿ ಪ್ರತಿಫಲಿಸಲಿ: ಡಿ.ಆರ್. ಪಾಟೀಲ್
Let the public's aspirations be reflected in the projects: D.R. Patil
ಕಾರವಾರ 16: ಗ್ರಾಮ ಪಂಚಾಯತ್ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಯೋಜನೆಗಳನ್ನು ರೂಪಿಸುವಾಗ ಸಾರ್ವಜನಿಕರ ಅಪೇಕ್ಷೆಗಳನ್ನು ಸೇರೆ್ಡಗೊಳಿಸಿ, ಸಮಗ್ರ ಯೋಜನೆ ಸಿದ್ದಪಡಿಸುವಂತೆ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ತಿಳಿಸಿದರು.
ಅವರು ಶುಕ್ರವಾರ ಶಿರಸಿಯ ಅಂಬೇಡ್ಕರ್ ಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಳಮಟ್ಟದಿಂದ ಯೋಜನೆಗಳನ್ನು ರೂಪಿಸುವ ಕುರಿತ ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಕೇಂದ್ರಿಕರಣ ವ್ಯವಸ್ಥೆಯಡಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾನೂನು ತಮಗೆ ನೀಡಿರುವ ಅಧಿಕಾರ ಚಲಾಯಿಸಿ, ಸೂಕ್ತ ರೀತಿಯಲ್ಲಿ ಜವಾಬ್ದಾರಿ ನಿಭಾಯಿಸಿ, ಜನೋಪಯೋಗಿ ಯೋಜನೆಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರಬೇಕು ಎಂದರು.
ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮತ್ತು ಸಮಗ್ರ ಅಭಿವೃದ್ಧಿಗಾಗಿ ಎಲ್ಲಾರೂ ಒಟ್ಟಾಗಿ ಕೆಲಸ ಮಾಡಬೇಕು, ಜನರ ಅಪೇಕ್ಷೆಗಳು ಬಜೆಟ್ ನಲ್ಲಿ ಪ್ರತಿಫಲಿಸಬೇಕು. ಕಾನೂನು ತಮಗೆ ನೀಡಿರುವ ಅಧಿಕಾರವನ್ನು ಮೊಟಕುಗೋಳಿಸದೆ ಅದರ ಸದುಪಯೋಗ ಆಗಬೇಕು. ನಿಜವಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಅನುಷ್ಠಾನವಾಗುವಂತೆ ಯೋಜನೆ ರೂಪಿಸಿ, ಗಾಂಧೀಜಿ ಕನಸಿನ ಗ್ರಾಮ ಸ್ವರಾಜ್ಯ ರೂಪಿಸಬೇಕು ಎಂದರು.
ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಮಾಜಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಮಾತನಾಡಿ, ಜಿಲ್ಲೆಯಲ್ಲಿ ಜನಸಂಖ್ಯೆ ಕಡಿಮೆ ಇದ್ದು, ವಿಸ್ತೀರ್ಣ ಅಧಿಕವಾಗಿದ್ದು, ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ನೀಡುವಾಗ ಇದನ್ನು ಪರಿಗಣಿಸಬೇಕು. ಜಿಲ್ಲೆಯು ಶೇ. 80 ರಷ್ಟು ತೋಟಗಾರಿಕಾ ಬೆಳೆಯನ್ನು ಅವಲಂಭಿಸಿದ್ದು, ಅಡಿಕೆ ಬೆಳೆಗೆ ತಗಲುವ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸೂಕ್ತ ಓಷಧಿ ಕಂಡು ಹಿಡಿಯಬೇಕು. ಕಾಲುಸಂಕ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಯೋಜನೆ ರೂಪಿಸುವಾಗ ದೂರದೃಷ್ಟಿ ಇರಬೇಕು, ಆದ್ಯತ ಕಾರ್ಯಗಳಿಗೆ ಹೆಚ್ಚಿನ ಅನುದಾನವನ್ನು ವೆಚ್ಚ ಮಾಡಬೇಕು. ಪ್ರತಿಯೊಂದು ಇಲಾಖೆಗೂ ಜವಾಬ್ದಾರಿ ನಕ್ಷೆ ಆಗಬೇಕು. ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜನ ಸಂಪರ್ಕ ಉತ್ತಮವಾಗಿರಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಮಾತನಾಡಿ, ಯೋಜನೆಗಳನ್ನು ರೂಪಿಸುವಾಗ ಸಂಪನ್ಮೂಲಗಳನ್ನು ಗುರುತಿಸಬೇಕು, ತಳಮಟ್ಟದಿಂದ ಸಮಸ್ಯೆಗಳನ್ನು ಅರಿತು ದುರದೃಷ್ಠಿ ಯೋಜನೆ ರೂಪಿಸಬೇಕು. ಸುಸ್ತಿರ ಅಭಿವೃದ್ಧಿ ಗುರಿ ಇರಬೇಕು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಉತ್ತೇಜಿಸಿ ಯೋಜನೆ ರೂಪಿಸಬಹುದಾಗಿದೆ ಎಂದರು.
ಸಭೆಯಲ್ಲಿ ಜಿ.ಪಂ. ಸಿಇಓ ಡಾ. ದೀಲೀಷ್ ಶಶಿ, ಶಿರಸಿ ಉಪ ವಿಭಾಗಾಧಿಕಾರಿ ಶಂಕರ್ ಗೌಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹಿರ್ ಅಬ್ಬಾಸ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಯೋಜನಾ ನಿರ್ದೇಶಕ ಕರೀಂ ಅಸಾದಿ, ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಅಧ್ಯಕ್ಷ ಎಂ. ಕೆ. ಭಟ್ ಮತ್ತಿತರರು ಇದ್ದರು.
ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲೆಯಲ್ಲಿ ಪ್ರಸ್ತುತ 2026-27 ನೇ ಸಾಲಿನ ಜಿಲ್ಲಾ ಪಂಚಾಯತ್ ವಾರ್ಷಿಕ ಕರಡು ಯೋಜನೆಯಲ್ಲಿ ರೂ.7, 107.84 ಕೋಟಿ, ನಗರ ಸ್ಥಳೀಯ ಸಂಸ್ಥೆಗಳ ಯೋಜನೆಗಳಲ್ಲಿ ರೂ. 3,671.43 ಕೋಟಿ ಸೇರಿದಂತೆ ಜಿಲ್ಲಾ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಒಟ್ಟು ರೂ. 13,811.19 ಕೋಟಿಗಳ ಕರಡು ಅಭಿವೃದ್ಧಿ ಯೋಜನೆಯನ್ನು ಸಿದ್ದಪಡಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 