ಕಷ್ಟದಲ್ಲಿ ನೆರವಾದವರಿಗೆ ಋಣ ತೀರಿಸುವ ಮನೋಭಾವ ಇರಲಿ: ಶಿವರಾಮ ಹೆಬ್ಬಾರ್
Let us have the attitude of repaying those who helped us in our difficulties: Shivaram Hebbar
ಮುಂಡಗೋಡ 23 : ಸಮಾಜ ನೀಡಿದ ಕೃತಜ್ಞತೆಯನ್ನು ಮರೆಯದೇ, ಕಷ್ಟದಲ್ಲಿ ನಮ್ಮನ್ನು ನೆನೆಸಿದವರಿಗೆ ನೆರವಾಗಿ ಋಣ ತೀರಿಸುವ ಮನೋಭಾವ ಪ್ರತಿಯೊಬ್ಬರಲ್ಲಿರಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಪಟ್ಟಣದ ಗಾಂಧಿನಗರದಲ್ಲಿರುವ ಸೇವಾಲಾಲ್ ಬಂಜಾರ ಸಮುದಾಯ ಭವನದಲ್ಲಿ ಆಯೋಜಿಸಿದ್ದ 287ನೇ ಸಂತ ಸೇವಾಲಾಲ್ ಮಹಾರಾಜ ಜಯಂತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂತ ಸೇವಾಲಾಲ್ ಮಹಾರಾಜರ ಪರಂಪರೆ, ಆದರ್ಶಗಳು ಮತ್ತು ಬೋಧನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಸಮಾಜದ ಜವಾಬ್ದಾರಿಯಾಗಿದೆ ಎಂದರು.
ನಾವು ಮಾಡುವ ಪ್ರತಿಯೊಂದು ಕಾರ್ಯವನ್ನೂ ದೇವರ ಸೇವೆಯೆಂದು ಭಾವಿಸಿ ನಿಷ್ಠೆಯಿಂದ ನಿರ್ವಹಿಸಿದರೆ ಶಾಶ್ವತ ಫಲ ದೊರೆಯುತ್ತದೆ ಎಂದು ತಿಳಿಸಿದರು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಜಯಂತೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಶಂಕರ ಗೌಡಿ ಮಾತನಾಡಿ, ಸಂತ ಸೇವಾಲಾಲ್ ಮಹಾರಾಜರು ಧಾರ್ಮಿಕ ಗುರುಗಳಷ್ಟೇ ಅಲ್ಲದೆ ಸಮಾಜದ ದಾರ್ಶನಿಕರು ಹಾಗೂ ಸಂಸ್ಕಾರಕರಾಗಿದ್ದರು ಎಂದರು. ಬಂಜಾರ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ದುಷ್ಪ್ರವೃತ್ತಿಗಳನ್ನು ತೊರೆದು ಶಿಸ್ತುಬದ್ಧ ಜೀವನ ನಡೆಸುವಂತೆ ಕರೆ ನೀಡಿದರು. ಬಂಜಾರಾ ಸಮುದಾಯದ ಸ್ವಾಮೀಜಿ ತಿಪ್ಪೇಸ್ವಾಮಿ ಗೂಡೂರ ಮಾತನಾಡಿ, ಸಮಾಜದ ಆಶಯಗಳಿಗೆ ಅನುಗುಣವಾಗಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿದರು. ಲಂಬಾಣಿ ಸಮಾಜದ ಅಭಿವೃದ್ಧಿಗೆ ಕಾಳಜಿ ವಹಿಸುತ್ತಿರುವ ಜನಪ್ರತಿನಿಧಿಗಳಲ್ಲಿ ಶಿವರಾಮ ಹೆಬ್ಬಾರ್ ಪ್ರಮುಖರು ಎಂದು ಪ್ರಶಂಸಿಸಿದರು. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ದೊರೆಯಲೆಂದು ಸಂತ ಸೇವಾಲಾಲ್ ಮಹಾರಾಜರ ಆಶೀರ್ವಾದ ಇರಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಂಡಗೋಡ ವಲಯ ಅರಣ್ಯಾಧಿಕಾರಿ ಅಪ್ಪಾರಾವ ಕಲ್ಲಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಮಾ ಜಿ, ಜಿಲ್ಲಾ ಗ್ಯಾರೆಂಟಿ ಯೋಜನೆಯ ಅಧ್ಯಕ್ಷೆ ಶಾರದಾಬಾಯಿ ರಾಥೋಡ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ರಾಮಣ್ಣ ಲಮಾಣಿ, ಶೇಖರ್ ಲಮಾಣಿ ಹಾಗೂ ಬಂಜಾರ ಸಮುದಾಯದ ಮುಖಂಡರು, ತಾಲೂಕು ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 