ಹಳೆ ಪಿಂಚಣಿ ಜಾರಿಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಚಳುವಳಿ
Letter movement to Chief Minister for implementation of old pension
ಹಳೆ ಪಿಂಚಣಿ ಜಾರಿಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಚಳುವಳಿ
ಕೊಪ್ಪಳ 31: ಏಪ್ರಿಲ್ 2006ರಿಂದ ಜಾರಿಯಾದ ನೂತನ ಪಿಂಚಣಿಯನ್ನು ವಿರೋಧಿಸಿ ಮತ್ತು ಹಳೆಯ ಪಿಂಚಣಿ ಜಾರಿಗಾಗಿ ರಾಜ್ಯಾದ್ಯಂತ ಸರಕಾರಿ ಮತ್ತು ಅನುದಾನಿತ ನೌಕರರು ಪತ್ರ ಚಳುವಳಿ ಹಮ್ಮಿಕೊಂಡಿದ್ದಾರೆ. ಏಪ್ರಿಲ್ 2006ರ ಪೂರ್ವದಲ್ಲಿ ಇದ್ದಂತೆ ಹಳೆಯ ಪಿಂಚಣಿ ಮುಂದುವರೆಸುವುದಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದ್ದರು.
ಆದರೆ ಸರಕಾರ ಬಂದು ಎರಡು ವರ್ಷಗಳು ಕಳೆದರೂ ಅದರ ಬಗ್ಗೆ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ನೌಕರರು ಪತ್ರ ಚಳುವಳಿಯನ್ನು ಹಮ್ಮಿಕೊಂಡಿದ್ದಾರೆ. ಅದರಂತೆ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿಯೂ ಸಹ ನೂತನ ಪಿಂಚಣಿ ರದ್ದುಗೊಳಿಸಿ ಹಳೆಯ ಪಿಂಚಣಿ ಮರುಜಾರಿಗಾಗಿ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದು ಕಳುಹಿಸಲಾಯಿತು. ಈ ಪತ್ರ ಚಳುವಳಿಯಲ್ಲಿ ಪ್ರಾಚಾರ್ಯರಾದ ಡಾ. ವಿರೇಶಕುಮಾರ, ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್, ಕಮಲಾ ಅಳವಂಡಿ, ಕುಬೇರ್ಪ ದಂಡಿನ, ಡಾ.ಬಾಳಪ್ಪ ತಳವಾರ, ಪಿ.ಗೋಪಾಲಪ್ಪ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 