ಹಿರೇಮುಗದೂರ ಗ್ರಾಮದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯ ಮನವಿ ಪತ್ರ

ಹಿರೇಮುಗದೂರ ಗ್ರಾಮದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯ ಮನವಿ ಪತ್ರ Letter of request demanding the sanction of a multispecialty hospital in Hiremugadur village

ಹಾವೇರಿ 29  :ಜಿಲ್ಲೆಯ ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಭಾರತ ಸರ್ಕಾರದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಹಿರೇಮುಗದೂರ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಎಂ ಆರೇರ ಜಿಲ್ಲಾಡಳಿತ ಭವನದಲ್ಲಿ ಹಾವೇರಿ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ ಮೂಲಕ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ಸವಣೂರ ತಾಲ್ಲೂಕಿನ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿರೇಮುಗದೂರ ಗ್ರಾಮದಲ್ಲಿ  ಆಯುಷ್ಮಾನ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಆಯುಷ್ಮಾನ್ ಆರೋಗ್ಯ ಮಂದಿರ ಸೇವೆ ಸಲ್ಲಿಸುತ್ತಿದ್ದು, ಹಿರೇಮುಗದೂರ ಗ್ರಾಮ ಸುಮಾರು 10-12 ಗ್ರಾಮಗಳ ಮಧ್ಯ ಭಾಗದಲ್ಲಿ ಇದ್ದು,

ಈ ಭಾಗದ ಜನರಿಗೆ ಹತ್ತಿರದಲ್ಲಿ ಎಲ್ಲಾ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಎಲ್ಲರಿಗೂ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ,ವಿಶೇಷ ಅನುದಾನದಿಂದ ಅಥವಾ ಪ್ರಧಾನಮಂತ್ರಿಗಳ ವಿಶೇಷ   ಅನುದಾನದಿಂದ ಹಿರೇಮುಗದೂರ ಗ್ರಾಮದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿ,ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಆಸ್ಪತ್ರೆ ಪ್ರಾರಂಭ ಮಾಡುವಂತೆ ಆಗಬೇಕು.ಈ ಬೇಡಿಕೆ ಈಡೇರಿಕೆ ಮಾಡಲು ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ತಾವುಗಳು ವಿಶೇಷ ಕಾಳಜಿವಹಿಸಿ ಹಿರೇಮುಗದೂರ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಹತ್ತಿರದಲ್ಲಿ ಎಲ್ಲಾ ಆರೋಗ್ಯ ಸೇವೆಗೆ ಅನುಕೂಲ ಮಾಡಿಕೊಡಬೇಕೆಂದು ಹಾಗೂ ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನಮ್ಮ ಈ ಬೇಡಿಕೆಗಳನ್ನು ಈಡೇರಿಸಬೇಕೆಂದು ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ ಅವರು ಮನವಿ ಪತ್ರದಲ್ಲಿ ಮನವಿ ಮೂಲಕ ಒತ್ತಾಯಿಸಿದ್ದಾರೆ.