ಧನಾತ್ಮಕ ಆಲೋಚನೆಗಳಿಂದ ಬದುಕನ್ನು ಕಟ್ಟಿಕೊಳ್ಳಬೇಕು: ಸೋಮನಾಳ
Life should be built on positive thoughts: Somanala
ವಿಜಯಪುರ 28: ಋಣಾತ್ಮಕ ಚಿಂತನೆಗಳಿಂದ ದೂರವಿದ್ದು ಧನಾತ್ಮಕ ಆಲೋಚನೆಗಳಿಂದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ನಡೆದ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಮಹತ್ವ, ಉಪನ್ಯಾಸಕರ ಜ್ಞಾನಶಕ್ತಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರಗಳ ಕುರಿತು ವಿವರಿಸಿದರು. ಉಪನ್ಯಾಸಕರು ಅಪಾರ ಪರಿಶ್ರಮದೊಂದಿಗೆ ಆಧುನಿಕ ವಿಜ್ಞಾನ, ತಂತ್ರಜ್ಞಾನ ಹಾಗೂ ಅಂತರ್ಜಾಲವನ್ನು ಸಮರ್ಕವಾಗಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಮಾತನಾಡಿ, ಉಪನ್ಯಾಸಕರ ಜ್ಞಾನಾರ್ಜನೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅತ್ಯಂತ ಅವಶ್ಯಕವಾಗಿದೆ. ಶಿಕ್ಷಕರು ವಿದ್ಯಾರ್ಥಿಗಳ ಗಮನ ಹಾಗೂ ಅವಧಾನವನ್ನು ಕೇಂದ್ರೀಕರಿಸುವಂತೆ ಪರಿಣಾಮಕಾರಿ ಬೋಧನಾ ವಿಧಾನಗಳ ವಿವಿಧ ಮಾದರಿಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಜಿ.ತಡಸದ ಮಾತನಾಡಿ, ಶಿಕ್ಷಕರು ಉತ್ತಮ ಮಾರ್ಗದರ್ಶಕರಾಗಿ ಪಾಠದ ಜೊತೆಗೆ ಮಾನವೀಯ ಮೌಲ್ಯಗಳು, ಶಿಸ್ತು ಮತ್ತು ಸಂಯಮವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಉತ್ತಮ ಸಂವಹನ, ಸ್ನೇಹಪೂರ್ಣ ಮನೋಭಾವ, ಸೃಜನಶೀಲ ಬೋಧನೆ, ಪಾಠದ ಪೂರ್ವಸಿದ್ಧತೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಶ್ನಿಸಲು ಅವಕಾಶ ನೀಡುವುದು ಅಗತ್ಯವೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಉದಯಕುಮಾರ ಕುಲಕರ್ಣಿ ಮಾತನಾಡಿ, ಶಿಕ್ಷಕರು ತರಗತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಂಡು, ಮೊಬೈಲ್ ಬಳಕೆಯನ್ನು ಅವಶ್ಯಕತೆಗೆ ಮಾತ್ರ ಸೀಮಿತಗೊಳಿಸಬೇಕು. ಧನಾತ್ಮಕ ಮನೋಭಾವನೆ ಬೆಳೆಸುವ ಮೂಲಕ ಆಶಾದಾಯಕ ಹಾಗೂ ಚಲನಶೀಲ ಬೋಧನೆ ಮಾಡಬೇಕು. ವಿಭಿನ್ನ ಬೋಧನಾ ವಿಧಾನಗಳು, ವಿದ್ಯಾರ್ಥಿಗಳಿಗೆ ಪ್ರಶ್ನಿಸಲು ಅವಕಾಶ ಮತ್ತು ಸೃಜನಶೀಲ ಚಟುವಟಿಕೆಗಳ ಮೂಲಕ ಪಾಠವನ್ನು ಪರಿಣಾಮಕಾರಿಯಾಗಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕೇವಲ ಪಾಠ ಬೋಧಿಸುವವರಷ್ಟೇ ಅಲ್ಲ, ವಿದ್ಯಾರ್ಥಿಗಳ ವ್ಯಕ್ತಿತ್ವ, ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಶಿಲ್ಪಿಗಳಾಗಿದ್ದಾರೆ. ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಮಾರ್ಗದರ್ಶನ ಅನಿವಾರ್ಯವಾಗಿದ್ದು, ಅವರ ಪ್ರೇರಣೆ ಮತ್ತು ಪರಿಶ್ರಮದಿಂದಲೇ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ದಾರಿಯನ್ನು ಹಿಡಿಯುತ್ತಾರೆ ಎಂದರು.
ಕಾರ್ಯಕ್ರಮದ ಸಂಯೋಜಕಿ ಡಾ.ಮೆಹರಾಜಬೇಗಂ ಸೈಯ್ಯದ, ಡಾ.ರೇಖಾ ಗಣಿಹಾರ, ಬೋಧಕರು ಮತ್ತು ಬೋಧಕೇತರರು ಉಪಸ್ಥಿತರಿದ್ದರು. ಸಾವಿತ್ರಿ ಪ್ರಾರ್ಥಿಸಿದರು. ಜಗದೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಡಾ.ಚಲುವರಾಜು ವಂದಿಸಿದರು. ಡಾ. ಜಕ್ಕವ್ವ ವಠ್ಠಾರ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 