ಪರಿಶುದ್ಧ ಬದುಕಿನಿಂದ ಜೀವನ ಉಜ್ವಲಗೊಳ್ಳಲಿದೆ : ರಂಭಾಪುರಿ ಸ್ವಾಮೀಜಿ
Life will be brighter with a pure life: Rambhapuri Swamiji
ಹಾನಗಲ್ 18 :ಬಹುಜನ್ಮದ ಪುಣ್ಯಫಲದಿಂದ ಮಾನವ ಜನ್ಮ ಪ್ರಾಪ್ತಿಯಾಗಿದೆ. ಒಳ್ಳೆಯ ಮತ್ತು ಕೆಟ್ಟ ಗುಣಗಳೆರಡೂ ಮಾನವನಲ್ಲಿವೆ. ಪರಿಶುದ್ಧ ಬದುಕಿನಿಂದ ಮಾತ್ರ ಜೀವನ ಉಜ್ವಲಗೊಳ್ಳಲಿದೆ ಎಂದು ಬಾಳೇಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಶಂಕರಿಕೊಪ್ಪ ಗ್ರಾಮದಲ್ಲಿ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಉದ್ಘಾಟನೆ ನೆರವೇರಿಸಿದ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಪಂಚ ಪೀಠಗಳು ಶತ, ಶತಮಾನಗಳಿಂದ ಶಾಂತಿ, ಸಮಾನತೆ, ಸಾಮರಸ್ಯ ಮತ್ತು ಸೌಹಾರ್ದತೆಯ ಸಂದೇಶ ಸಾರಿವೆ. ಪಂಚಪೀಠಗಳು ಜ್ಞಾನ, ಭಕ್ತಿ ಮತ್ತು ಸೇವಾ ಪರಂಪರೆಯ ಜೀವಂತ ಸಂಕೇತವಾಗಿವೆ. ಸಾಮಾಜಿಕ ಸುಧಾರಣೆಯಲ್ಲಿ ಪಂಚಪೀಠಾಧೀಶ್ವರರ ಕೊಡುಗೆ ಅಪಾರ. ಅನ್ನದಾನ, ಆಶ್ರಯದಾನ, ಶಿಕ್ಷಣದಾನ ಇತ್ಯಾದಿ ಚಟುವಟಿಕೆಗಳು ಅನುಕರಣೀಯವಾಗಿವೆ. ವಚನ ಸಾಹಿತ್ಯ, ಶರಣ ಸಂಪ್ರದಾಯ, ತತ್ವಶಾಸ್ತ್ರ ಉಳಿಸಿ, ಬೆಳೆಸಿದ ಶ್ರೇಯಸ್ಸೂ ಸಹ ಪೀಠಗಳಿಗೆ ಸಲ್ಲಬೇಕಿದೆ ಎಂದರು.
ಕವಲೆದುರ್ಗದ ಭುವನಗಿರಿ ಮಠದ ಮರುಳಸಿದ್ದ ಸ್ವಾಮೀಜಿ, ಬಂಕಾಪುರದ ರೇವಣಸಿದ್ದೇಶ್ವರ ಸ್ವಾಮೀಜಿ, ರಟ್ಟೀಹಳ್ಳಿಯ ಶಿವಲಿಂಗ ಸ್ವಾಮೀಜಿ, ಸಾಲೂರಿನ ಗುರುಲಿಂಗ ಸ್ವಾಮೀಜಿ, ನೆಗಳೂರಿನ ಗುರುಶಾಂತೇಶ್ವರ ಸ್ವಾಮೀಜಿ, ಕೂಡಲದ ಗುರುಮಹೇಶ್ವರ ಸ್ವಾಮೀಜಿ, ಕಡೆನಂದಿಹಳ್ಳಿಯ ರೇವಣಸಿದ್ದೇಶ್ವರ ಸ್ವಾಮೀಜಿ, ತಿಳವಳ್ಳಿಯ ನಿರಂಜನ ಸ್ವಾಮೀಜಿ, ಕುಮಾರಪಟ್ಟಣದ ಜಗದೀಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು.
ಮಾಜಿ ಶಾಸಕ ಶಿವರಾಜ ಸಜ್ಜನರ,ಜಿಪಂ ಮಾಜಿ ಸದಸ್ಯ ಮಾಲತೇಶ ಸೊಪ್ಪಿನ, ಮುಖಂಡರಾದ ಭರಮಣ್ಣ ಶಿವೂರ, ಕರಬಸಪ್ಪ ಶಿವೂರ, ನಿಂಗಪ್ಪ ಪೂಜಾರ, ಸಿದ್ದಲಿಂಗಪ್ಪ ಶಂಕರಿಕೊಪ್ಪ, ಶೇಖರಯ್ಯ ಮಠದ, ಮಂಜುನಾಥ ಮಠದ ಇದ್ದರು. ಡಾ.ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 