ತಾಲೂಕಿನಾದ್ಯಂತ ಕೆಲ ಗ್ರಾಮಗಳಲ್ಲಿಯ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ
Liquor sales in grocery stores in some villages across the taluk
ಕಾಗವಾಡ 19 ತಾಲೂಕಿನಾದ್ಯಂತ ಕೆಲ ಗ್ರಾಮಗಳಲ್ಲಿಯ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ನಿರಂತರವಾಗಿ ನಡೆಯುತ್ತಿದ್ದು, ಅಬಕಾರಿ ಅಧಿಕಾರಿಗಳು ಕಂಡು ಕಾಣದಂತೆ ಜಾಣ ಮೌನ ವಹಿಸಿದ್ದಾರೆ. ಇನ್ನೂ ಕಿರಾಣಿ ಅಂಗಡಿ ಮಾಲೀಕರನ್ನು ಈ ಕುರಿತು ಪ್ರಶ್ನೇ ಮಾಡಿದರೇ ನಾವು ಹಪ್ತಾ ನೀಡುತ್ತೇವೆ ಎಂದು ಉತ್ತರಿಸುತ್ತಿದ್ದಾರೆ.
ತಾಲೂಕಿನ ಕೆಂಪವಾಡ, ನವಲಿಹಾಳ, ಶಿರಗುಪ್ಪಿ ಸೇರಿದಂತೆ ಅನೇಕ ಗ್ರಾಮಗಳ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ನಿರಂತರವಾಗಿ ನಡೆಯುತ್ತಿರುವ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಜೊತೆಗೆ ಇನ್ನೂ ವಿವಿಧ ಗ್ರಾಮಗಳಲ್ಲಿ ಈ ರೀತಿ ಕಿರಾಣಿ ಅಂಗಡಿ, ಮನೆಗಳಲ್ಲಿ ಮದ್ಯ ಮಾರಾಟ ನಡೆಯುತ್ತಿರುವುದು ಅಬಕಾರಿ ಅಧಿಕಾರಿಗಳ ನಡೆಯ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ.
ಈ ಕುರಿತು ಅಬಕಾರಿ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೇ ಅವರು ಯಾವ ಕರೆಗಳನ್ನು ಸ್ವೀಕರಿಸುವುದಿಲ್ಲ. ಇದರಿಂದ ಅಧಿಕಾರಿಗಳೇ ಈ ರೀತಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ನೀಡಿದ್ದಾರೆಯೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ತಾಲೂಕಿನಲ್ಲಿ ಸಾಕಷ್ಟು ವೈನ್ ಶಾಪ್‌ಗಳು, ಬಾರ್‌ಗಳಿದ್ದರೂ ಅಬಕಾರಿ ಇಲಾಖೆಯ ಟಾಗ್ರೆಟ್ ರಿಚ್ ಆಗುತ್ತಿಲ್ಲವೇ..? ಅಬಕಾರಿ ಅಧಿಕಾರಿಗಳು ತಮ್ಮ ಟಾಗ್ರೆಟ್ ರಿಚ್ ಮಾಡುವ ಉದ್ದೇಶದಿಂದ ತಾಲೂಕಿನ ಕೆಲ ಗ್ರಾಮಗಳ ಕಿರಾಣ ಅಂಗಡಿಗಳನ್ನೇ ಈಗ ವೈನ್ ಶಾಪ್‌ಗಳಾಗಿ ಮಾರ್ಾಡು ಮಾಡಿದ್ದಾರೆಯೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.
ಜನನಿಬಿಡ ರಸ್ತೆ ಪಕ್ಕದ ಅಂಗಡಿಗಳಲ್ಲಿಯೇ ಮದ್ಯ ಮಾರಾಟದಿಂದ ಕುಡುಕರ ಹಾವಳಿ ಹೆಚ್ಚಾಗಿ ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗುತ್ತಿದ್ದರೂ ಸಹ ಅಬಕಾರಿ ಅಧಿಕಾರಿಗಳು ಮಾತ್ರ ಮೌನ ವಹಿಸಿರುವುದು ಸಂಶಯಕ್ಕೆ ಕಾರಣವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 