ರಾಷ್ಟ್ರೀಯ ಪೆರಿಯೊಡಾಂಟಿಸ್ಟ್ ದಿನದ ಅಂಗವಾಗಿ ನೇರ ಫೋನ್-ಇನ್ ಕಾರ್ಯಕ್ರಮ
Live phone-in program as part of National Periodontist Day
ಬೆಳಗಾವಿ 23 : ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕೆಎಲ್‌ಇ ವಿಶ್ವನಾಥ ಕತ್ತಿ ದಂತ ವಿಜ್ಞಾನ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಸೋಮವಾರ 23ನೆ ಫೆಬ್ರುವರಿ 2026 ರಂದು ರಾಷ್ಟ್ರೀಯ ಪೆರಿಯೊಡಾಂಟಿಸ್ಟ್ ದಿನದ ಅಂಗವಾಗಿ ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಗಾವಿಯ ಕೆಎಲ್‌ಇ ವಿಶ್ವನಾಥ ಕತ್ತಿ ದಂತ ವಿಜ್ಞಾನ ಮಹಾವಿದ್ಯಾಲಯದ ಪೆರಿಯೊಡಾಂಟಿಸ್ಟ್ ವಿಭಾಗದ ರೀಡರ್ ಡಾ. ವಿಲಾಸ ಪತ್ತಾರ ಮತ್ತು ಡಾ. ಶೃತಿ ಕರ್ವೆಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ದಿನದ ಉದ್ದೇಶ, ಮಹತ್ವ ಮತ್ತು ಈ ದಿನದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮಗಳು ಹಾಗೂ ಕೆಎಲ್‌ಇ ವಿಶ್ವನಾಥ ಕತ್ತಿ ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಲಭ್ಯವಿರುವ ದಂತ ಚಿಕಿತ್ಸೆಗಳ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 