ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ : ಖಾದ್ರಿ
ಶಿಗ್ಗಾವಿ 31: ತಾಲೂಕಿನ ಹುಲಗೂರ ಗ್ರಾಮಕ್ಕೆ ನೂರಾರು ಸಂಖ್ಯೆಯಲ್ಲಿ ಸ್ಥಳೀಯ ಮುಖಂಡರುಗಳು ತಮ್ಮ ಸಮಸ್ಯೆಗಳನ್ನು ಹೊತ್ತು ಪರಿಹಾರಕ್ಕಾಗಿ ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಗೃಹ ಕಚೇರಿಗೆ ತೆರಳಿ ಮನವಿ ಅರ್ಿಸಿದರು.
ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಪರಿಹಾರ ಸೂಚಿಸಿದರು ಆಕಸ್ಮಿಕ ಬೆಂಕಿ ತಗಲಿ ಬೆಳೆ ಹಾನಿಯಾದ ಬಗ್ಗೆ ಕಂದಾಯ ಇಲಾಖೆ ಕೃಷಿ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಪರಿಹಾರಕ್ಕೆ ಸೂಚಿಸುವುದಾಗಿ ಕುದ್ದು ಸ್ಥಳಕ್ಕೆ ಬರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಸಾಮಾಜಿಕ ಹೋರಾಟಗಾರ ಪಕ್ಷದ ತಾಲೂಕ ವಕ್ತಾರ ಮಂಜುನಾಥ ಮಣ್ಣಣ್ಣವರ ಜೊತೆ ಚರ್ಚೆ ಮಾಡಿ ನೀವು ಕೂಡ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಜೆ ಮುಲ್ಲಾರವರು ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ತಾಲೂಕಿನ ಪಕ್ಷದ ಮುಖಂಡರು ರೈತ ಬಾಂಧವರು ಉಪಸ್ಥಿತರಿದ್ದರು.