ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್‌ನಲ್ಲಿ ಬಳ್ಳಾರಿ ವಿವಿ ಯ ಲೊಕೇಶ್ ರಾಥೋಡ್ ಗೆ ಕಂಚಿನ ಪದಕ
Lokesh Rathod of Bellary University wins bronze medal at Khelo India University Games
ಬಳ್ಳಾರಿ 04: ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 5 ರವರೆಗೆ ನಡೆದ 5ನೇ ಆವೃತ್ತಿಯ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಲೋಕೇಶ್ ರಾಥೋಡ್ (ಜಿ.ಬಿ.ಆರ್. ಕಾಲೇಜು ಹೂವಿನಹಡಗಲಿ) ಡೆಕಾಥ್ಲಾನ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ಇವರ ಸಾಧನೆಗೆ ಮತ್ತು ತಂಡದ ವ್ಯವಸ್ಥಾಪಕ ಮಲ್ಲಿಕಾರ್ಜುನ.ವೈ ಮತ್ತು ತರಬೇತುದಾರ ಬಡೇಸಾಬ ಅವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 