ಲಾರಿ ಡಿಕ್ಕಿ: ಬೈಕ್ ಸವಾರ ಸಾವು

Lorry collision: Bike rider killed

ಲಾರಿ ಡಿಕ್ಕಿ: ಬೈಕ್ ಸವಾರ ಸಾವು 

ದೇವರಹಿಪ್ಪರಗಿ, 04: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ರವಿವಾರದಂದು ನಡೆದಿದೆ. ಪಟ್ಟಣದ ಹರೀಶ್ ಶಿವಯೋಗಿ ಸಾಲೋಟಗಿ (34) ಮೃತ ದುರ್ದೈವಿ. ಸ್ನೇಹಿತರ ಮನೆಗೆ ಹೋಗುವಾಗ ದುರಂತ ನಡೆದಿದೆ.  

ಸ್ಥಳೀಯರ ಸಹಾಯದಿಂದ ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಸೋಲಾಪುರಕ್ಕೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಮಂಗಳವಾರ ಸಾವನ್ನುಪ್ಪಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಲಾರಿ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಈ ಕುರಿತು ಮೃತರ ತಂದೆ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ