ಹೊಳಗುಂದಿ; ಗ್ರಾ.ಪಂ.ಅಧ್ಯಕ್ಷರಾಗಿ ಧನರಾಜ್ ಅವಿರೋಧ ಆಯ್ಕೆ
ಹೂವಿನಹಡಗಲಿ 31: ತಾಲ್ಲೂಕಿನ ಹೊಳಗುಂದಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಧನರಾಜ್ ಅವಿರೋಧವಾಗಿ ಆಯ್ಕೆಯಾದರು.ಹೊಳಗುಂದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಧನರಾಜ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಚುನಾವಣಾಧಿಕಾರಿ ತಹಶಿಲ್ದಾರರ ಸಂತೋಷ ಅವಿರೋಧ ಆಯ್ಕೆ ಪ್ರಕಟಿಸಿದರು.ಗ್ರಾಮ ಪಂಚಾಯತ್ ಒಟ್ಟು 18ಸದಸ್ಯರಲ್ಲಿ 13 ಜನ ಸದಸ್ಯರು ಇದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ಪ.ಸಿಬ್ಬಂದಿ .ಬಿಜೆಪಿ ಮುಖಂಡರು ಭಾಗವಹಿಸಿದ್ದರು.