ಟಿಪ್ಪು ಸುಲ್ತಾನ್ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಎಂ.ಮೆಹಬೂಬ್ ಆಯ್ಕೆ
M. Mehboob elected as taluk president of Tipu Sultan organization
ಕಂಪ್ಲಿ 10: ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಮಜಾಲೀಸ್ ಟಿಪ್ಪು ಸುಲ್ತಾನ್ ಸಂಘಟನೆಯ ತಾಲ್ಲೂಕು ಘಟಕವನ್ನು ಪ್ರಾರಂಭಿಸಲಾಯಿತು. ಕಂಪ್ಲಿ ತಾಲೂಕು ಮಜಾಲೀಸ್ ಟಿಪ್ಪು ಸುಲ್ತಾನ್ ಸಂಘಟನೆಯ ಕಂಪ್ಲಿ ತಾಲೂಕು ಅಧ್ಯಕ್ಷರಾಗಿ ಎಂ ಮೆಹಬೂಬ್ ಅವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಿ ವಿಜಯನಗರ ಜಿಲ್ಲಾ ಘಟಕ ಅಧ್ಯಕ್ಷರ ಇರ್ಫಾನ್ ರವರು ಘೋಷಣೆ ಮಾಡಿ ಆದೇಶ ಪತ್ರ ನೀಡಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಸೋಮಲಾಪುರ ಗ್ರಾಮ ಘಟಕಗಳ ನೇಮಕ ಹಾಗೂ ಸಂಘ ರಚನೆ ಮಾಡಿ ಆದೇಶ ಪತ್ರ ನೀಡಲಾಯಿತು. ವಿಜಯನಗರ ಜಿಲ್ಲಾ ಘಟಕ ಅಧ್ಯಕ್ಷರ ಇರ್ಫಾನ್ ಕಟಿಗಿ ಮಾತನಾಡಿ, ಸಮಾಜಮುಖಿ ಕಾರ್ಯಗಳಲ್ಲಿನಮ್ಮ ಸಂಘಟನೆ ತೊಡಗಿಸಿಕೊಂಡಿದೆ. ಶಿಕ್ಷಣ ಮತ್ತು ಸಾಕ್ಷರತೆ, ವಿದ್ಯಾಭ್ಯಾಸಕ್ಕೆ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಆರೋಗ್ಯ ಮತ್ತು ವೈದ್ಯಕೀಯ ಸೇವೆ, ನಿಯಮಿತವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಬಲೀಕರಣಕ್ಕೆ ಒತ್ತು ನೀಡುವದು, ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಸಮುದಾಯ ಸೇವೆ ಮತ್ತು ಅಭಿವೃದ್ಧಿ ದೀನದಲಿತರ ಸೇವಾ ಕಾರ್ಯಗಳನ್ನು ನಿರ್ವಹಿಸಲಾಗುವುದು ಎಂದರು.
ನೂತನ ಕಂಪ್ಲಿ ತಾಲೂಕು ಅಧ್ಯಕ್ಷ ಎಂ ಮೆಹಬೂಬ್ ಮಾತನಾಡಿ ಸಮಾಜಗಾಗಿ ಏಳಿಗೆ ಮತ್ತು ಸಮಾಜಸೇವೆ, , ಅನ್ಯಾಯ ವಿರುದ್ದ ಹೋರಾಟ ಹಾಗೂ ಸಂಘಟನೆ ಬಲವನ್ನು ಮಾಡಿ ಸಮಾಜಕ್ಕೆ ಒಳ್ಳೆ ಕಾರ್ಯಗಳನ್ನು ನಿರ್ವಹಿಸುತ್ತೇನೆ ಎಂದರು. ಸೋಮಲಾಪುರ ಗ್ರಾಮ ಘಟಕದ ಅಧ್ಯಕ್ಷರಾಗಿ ಮೆಹಬೂಬ್, ಉಪಾಧ್ಯಕ್ಷರಾಗಿ ಇಮಾಮ್ ಹುಸೈನ್, ಪ್ರದಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಫೀಕ್, ಕಾರ್ಯದರ್ಶಿಯಾಗಿ ರಾಜಭಕ್ಷಿ, ಖಜಾಂಚಿ ಎಂ. ಮೌಲಾಸಬ್ ಇತರರನ್ನು ಸದ್ಯಸರಾಗಿ ನೇಮಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 