ಚೆನ್ನೈ, ಏ.4- ನಿಮಗೆ ಧೈರ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ದಾಳಿ ಮಾಡಿ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಡಿಎಂಕೆ ಪಕ್ಷದ ಮುಖ್ಯಸ್ಥ ಹಾಗೂ ತಮಿಳುನಾಡು ವಿರೋಧ ಪಕ್ಷದ ನಾಯಕ ಎಂ.ಕೆ.ಸ್ಟಾಲಿನ್ ನೇರ ಸವಾಲು ಹಾಕಿದ್ದಾರೆ.
ಮುಖ್ಯಮಂತ್ರಿ ಇ.ಪಳನಿ ಸ್ವಾಮಿ, ಉಪ ಮುಖ್ಯಮಂತ್ರಿ .ಪನ್ನೀರ್ ಸೆಲ್ವಂ ಅವರ ಮನೆ ಮೇಲೂ ದಾಳಿ ನಡೆಸಲಿ. ಅಲ್ಲಿ ಅಪಾರ ಪ್ರಮಾಣದ ಹಣ ಲಭಿಸುತ್ತದೆ ಎಂದು ಸ್ಟಾಲಿನ್ ಐಟಿ ಇಲಾಖೆಗೆ ಮತ್ತೊಂದು ಸವಾಲು ಎಸೆದಿದ್ದಾರೆ.
ಪನ್ನೀರ್ ಸೆಲ್ವಂ ಅವರ ಮಗ ಕೂಡ ಥೇಣಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಅವರ ಗೆಲುವಿಗೆ ಹರಸಾಹಸ ಪಡುತ್ತಿರುವ ಪನ್ನೀರ್ ಸೆಲ್ವಂ ದುಡ್ಡಿನ ಹೊಳೆಯನ್ನೇ ಹರಿಸಲು ಸಿದ್ಧರಾಗಿದ್ದಾರೆ. ಅಲ್ಲಿ ಐಟಿ ದಾಳಿ ನಡೆಸಿ ಅಧಿಕಾರಿಗಳು ತಮ್ಮ ಸಾಮಥ್ರ್ಯ ತೋರಿಸಲಿ. ಆದರೆ ಅಧಿಕಾರಿಗಳು ದಾಳಿ ನಡೆಸುತ್ತಾರೆಯೇ ಎಂದು ಸ್ಟಾಲಿನ್ ಪ್ರಶ್ನಿಸಿದರು.
ಅಂತೆಯೇ ಕೊಯಮತ್ತೂರಿನಲ್ಲಿ ತಮ್ಮ ಮೈತ್ರಿ ಪಕ್ಷದ ಅಭ್ಯಥರ್ಿ ಸಿಪಿಐಎಂನ ಪಿ.ಆರ್.ನಟರಾಜನ್ ಅವರ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಮಾತನಾಡಿದ ಸ್ಟಾಲಿನ್, ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಿಡಿಕಾರಿ ಪ್ರಧಾನಿ ನಿವಾಸದ ಮೇಲೆ ದಾಳಿ ನಡೆಸಿ ಎಂದು ಐಟಿ ಇಲಾಖೆಯನ್ನು ಕೆದಕಿದರು.
ಇದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕುತಂತ್ರ ಎಂದು ಆರೋಪಿಸಿದ ಅವರು, ಕೇಂದ್ರದ ಮೋದಿ ಸಕರ್ಾರ ಆದಾಯ ತೆರಿಗೆ ಇಲಾಖೆಯನ್ನು ತನ್ನ ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತನ್ನ ವಿರೋಧಿಗಳನ್ನು ಹಣಿಯಲು ಐಟಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಟಾಲಿನ್, ಆದಾಯ ತೆರಿಗೆ ಇಲಾಖೆ ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ. ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದೆ ಅಧಿಕಾರಿಗಳು ಅವರು ಎಲ್ಲೆಲ್ಲಿ ದಾಳಿ ಮಾಡಿ ಎಂದು ತೋರಿಸುತ್ತಾರೆಯೋ ಅಲ್ಲೆಲ್ಲಾ ದಾಳಿ ನಡೆಸುತ್ತಿದ್ದಾರೆ. ಅದೇ ರೀತಿಯಲ್ಲಿ ತಮಿಳುನಾಡಿನಲ್ಲೂ ದಾಳಿ ನಡೆಸಿದ್ದಾರೆ. ಅವರಿಗೆ ಧೈರ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ದಾಳಿ ಮಾಡಲಿ. ಖಂಡಿತ ಅವರಿಗೆ ಕೋಟಿಗಟ್ಟಲೆ ಅಕ್ರಮ ಹಣ ದೊರೆಯುತ್ತದೆ ಎಂದು ತಿಳಿಸಿದರು.