ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಜೆ.ಎನ್ ಗಣೇಶ ಭೂಮಿಪ್ರಜೆ
MLA J.N. Ganesh Bhoomipraje for school room construction work
ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಜೆ.ಎನ್ ಗಣೇಶ ಭೂಮಿಪ್ರಜೆ
ಕಂಪ್ಲಿ.24. ತಾಲೂಕಿನ ಸಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅರಳಹಳ್ಳಿ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ ಸುಮಾರು 14.89 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಜೆ.ಎನ್ ಗಣೇಶ ಭೂಮಿ ನೇರವೇರಿಸಿದರು. ನಂತರ ಶಾಸಕ ಗಣೇಶ ಮಾತನಾಡಿ, ಮಕ್ಕಳ ಶೈಕ್ಷಣಿಕ ಮಟ್ಟದ ಅಭಿವೃದ್ಧಿಗೆ ಪ್ರತಿಯೊಂದು ಹಂತದಲ್ಲಿ ಅನುದಾನ ತಂದು, ಅಭಿವೃದ್ಧಿಪಡಿಸಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಮೊದಲ ಅಧ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಿಸಿರಸ್ತೆ ಬಿದಿ ದೀಪ ಸೇರಿ ಅನೇಕ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಮುಂದಿನ ದಿನದಲ್ಲಿ ಸಣಾಪುರ ಗ್ರಾಮದ ಹೊರಗಡೆಯಿಂದ ಬೈಪಾಸ್ ರಸ್ತೆ ಮಾಡಲಾಗುವುದು ಎಂದರು.
ಇಲ್ಲಿನ ಸಣಾಪುರ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ ಸುಮಾರು 20 ಲಕ್ಷ ಅಂಗನವಾಡಿ ಶಾಲಾ ಕಟ್ಟಡ ಮತ್ತು 30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗ್ರಂಥಾಲಯ ಕಟ್ಟಡವನ್ನು ಶಾಸಕರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಿಡಿಒ ಶೇಷಗಿರಿ, ಮುಖ್ಯಗುರು ಇಮಾಮ್‌ಸಾಬ್, ಮುಖಂಡರಾದ ನಿಂಗಪ್ಪ, ಸಿದ್ದಪ್ಪ, ಶಿವಪ್ಪ ಪ್ರಜಾರಿ, ಜ್ಯೋತಿ, ಸಣಾಪುರ ಗ್ರಾಮದ ಗ್ರಾಪಂ ಅಧ್ಯಕ್ಷ ಟಿ.ರಮಣಯ್ಯ, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಈಶಣ್ಣ, ವೆಂಕಟರಾಮರಾಜು, ಹನುಮಂತಪ್ಪ, ರಾಜಕುಮಾರ, ಕೆ.ದೊಡ್ಡಬಸಪ್ಪ, ಮಾರೆಣ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಸೆ.001: ಅರಳಹಳ್ಳಿ ತಾಂಡದಲ್ಲಿ ಶಾಲಾ ಕೊಠಡಿ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ ನೆರವೇರಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 