ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಉದ್ಘಾಟಿಸಿದ ಶಾಸಕ ಜೆ.ಎನ್.ಗಣೇಶ
MLA J.N. Ganesh inaugurated a dialysis unit at a government hospital
ಕಂಪ್ಲಿ 14: ರಾಜ್ಯದಲ್ಲಿ ಬಡ ಜನರ ಅನುಕೂಲಕ್ಕಾಗಿ ಪ್ರತಿಯೊಂದು ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಪ್ರಾರಂಭ ಮಾಡುವುದರೊಂದಿಗೆ ಬಡವರಿಗೆ ಅನುಕೂಲವಾಗಲಿ ಎನ್ನುವ ಉದೇಶದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ದೂರದೃಷ್ಟಿಯಿಂದ ತಾಲ್ಲೂಕು ಕೇಂದ್ರವಾಗಿರುವ ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಡಯಾಲಿಸಿಸ್ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಗೊಂಡ ಡಯಾಲಿಸಿಸ್ ಘಟಕ ಬುಧವಾರ ಉದ್ಘಾಟಿಸಿ ಮಾತನಾಡಿ, ಡಯಾಲಿಸಿಸ್‌ಗೆ ಒಳಪಡುವ ರೋಗಿಗಳಿದ್ದು ಅಂತಹ ಬಡರೋಗಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆರೋಗ್ಯ ಪ್ರತಿಯೊಬ್ಬರಿಗೂ ಅತೀಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತಾಲ್ಲೂಕು ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಿಸಿದ್ದು, ಇಲ್ಲಿನ ಕೇಂದ್ರದಲ್ಲಿ ಎರಡು ಹಾಸಿಗೆಗಳು ಇದ್ದು, ರೋಗಿಗಳು ಇದರ ಸದುಪಯೋಗಪಡಿಸಿಕೊಂಡು ಆರೋಗ್ಯದ ಕಡೆಗೆ ಗಮನ ಹರಿಸಬೇಕು ಸಾರ್ವಜನಿಕರಿಗೆ ಉಚಿತವಾಗಿ ಪಡೆಯಬಹುದು ಎಂದರು.ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ರವೀಂದ್ರ ಕನಿಕೇರಿ, ಡಾ.ವಿರೇಶ, ಡಾ.ಸಾಗರ, ಡಾ.ಮಲ್ಲೇಶಪ್ಪ, ಡಾ.ಶ್ರೀನಿವಾಸ, ಮುಖಂಡರಾದ ಸಿ.ಆರ್.ಹನುಮಂತ, ಹಬೀಬ್ ರೆಹಮಾನ್, ಕೆ.ಷಣ್ಮುಕಪ್ಪ, ಪೇಂಟರ್ ಮಸ್ತಾನ್ ಸೇರಿದಂತೆ ಇಲಾಖೆಯ ಸಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 