ಲೋಕದರ್ಶನ ವರದಿ
ಬೆಳಗಾವಿ ,9 :ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಕನರ್ಾಟಕ ಸ್ಟೇಟ್ ಮಿನರಲ್ ಕಾಪರ್ೋರೇಷನ್ ಲಿಮಿಟೆಡ್ ( ಮೈಸೂರು ಮಿನರಲ್ ಲಿಮಿಟೆಡ್) ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಶಾಂತಿ ನಗರದಲ್ಲಿರುವ ಮೈಸೂರು ಮಿನರಲ್ಸ್ ಲಿ ಕಚೇರಿಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಪೂಜೆ ನೆರವೇರಿಸಿದ ಬಳಿಕ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾಯರ್ಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ಶ್ರೀಮಂತ ಪಾಟೀಲ, ಮಹಾಂತೇಶ ಕೌಜಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ನೂರಾರು ಜನ ಮುಖಂಡರು ಲಕ್ಷ್ಮಿ ಹೆಬ್ಬಾಳಕರ ಅವರನ್ನು ಅಭಿನಂದಿಸಿ, ಶುಭ
ಕೋರಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಆಗಮಿಸಿದ್ದ ನೂರಾರು ಜನ ಲಕ್ಷ್ಮಿ ಹೆಬ್ಬಾಳಕರ ಅವರ ಅಭಿಮಾನಿಗಳು ಜಯ ಘೋಷಣೆಗಳನ್ನು ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು, ಪಕ್ಷ ತಮ್ಮ ಸೇವೆಯನ್ನು ಗುರುತಿಸಿ, ಮೈಸೂರು ಮಿನರಲ್ಸ್ ಲಿಮಿಟೆಡ್ನ ಜವಾಬ್ದಾರಿಯನ್ನು ನೀಡಿದೆ. ಈಗಾಗಲೇ ನಿಗಮದ ಕಾರ್ಯವ್ಯಾಪ್ತಿಯ ಬಗ್ಗೆ ತಿಳಿದುಕೊಂಡಿದ್ದೇನೆ. ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಸಮ್ಮಿಶ್ರ ಸಕರ್ಾರಕ್ಕೆ ಒಳ್ಳೆಯ ಹೆಸರು ತರುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿದ್ದೇವೆ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿರುವುದು ಸಹಜ. ಅವೆಲ್ಲವೂಗಳನ್ನು ಸರಿಪಡಿಸಿಕೊಂಡು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹೋರಾಡುತ್ತೇವೆ ಎಂದರು.
ಲಕ್ಷ್ಮಿ ಹೆಬ್ಬಾಳಕರ ಅವರನ್ನು ಶುಭಕೋರಿದ ಬಳಿಕ ಮಾತನಾಡಿದ ಈಶ್ವರ ಖಂಡ್ರೆ ಅವರು ಲಕ್ಷ್ಮಿ ಹೆಬ್ಬಾಳಕರ ಒಬ್ಬ ಒಳ್ಳೆಯ ಸಂಘಟಕಿ. ಹಾರ್ಡವರ್ಕರ್. ಪಕ್ಷ ಅವರಿಗೆ ಈ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದು, ಅವರು ಪಕ್ಷಕ್ಕೆ ಒಳ್ಳೆಯ ಹೆಸರು ತರುವಲ್ಲಿ ಎರಡು ಮಾತಿಲ್ಲ. ಅವರಿಗೆ ಸಚಿವ ಸ್ಥಾನ ಸಿಗಬೇಕಾಗಿತ್ತು. ಅದು ಕೂಡ ಅದಷ್ಟು ಬೇಗನೆ ಸಿಗುತ್ತದೆ ಎಂದು ಹೇಳಿದರು.