ಪೊಲೀಸರಿಗೆ ನೂತನ ವಾಹನ ವಿತರಿಸಿದ ಶಾಸಕ ರಾಜುಗೌಡ

MLA Raju Gowda distributed a new vehicle to the police

ಪೊಲೀಸರಿಗೆ ನೂತನ ವಾಹನ ವಿತರಿಸಿದ ಶಾಸಕ ರಾಜುಗೌಡ

ದೇವರಹಿಪ್ಪರಗಿ 12: ಶಾಸಕರ ಅನುದಾನದಲ್ಲಿ ಪಟ್ಟಣದ ಪೊಲೀಸ್ ಠಾಣೆಗೆ ನೂತನ ಬೊಲೆರೋ ವಾಹನವನ್ನು ಪಿಎಸ್‌ಐ ಬಸವರಾಜ ತಿಪ್ಪರಡ್ಡಿ ಅವರಿಗೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ವಿತರಿಸಿದರು.ಪಟ್ಟಣದ ಪ್ರವಾಸಿ ಮಂದಿರದ ಬಳಿ ಬುದುವಾರದಂದು ವಾಹನ ವಿತರಣೆ ಮಾಡಿ ಮಾತನಾಡಿದ ಅವರು, ಪೊಲೀಸ್ ಠಾಣೆಗೆ ವಾಹನಗಳ ಅವಶ್ಯಕತೆ ಇದೆ, ಪಟ್ಟಣದ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕಾರಣ ವಾಹನಗಳ ದಟ್ಟಣೆಯನ್ನು ನಿಭಾಯಿಸಲು ಹಾಗೂ ಪೊಲೀಸ್ ಠಾಣೆ ಹೆಚ್ಚು ಜನಸ್ನೇಹಿಯಾಗಲು ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಜಿ.ಪಂ ಯೋಜನಾಧಿಕಾರಿ ನಿಂಗಪ್ಪ ಗೋಠೆ, ತಹಶೀಲ್ದಾರ್ ಪ್ರಕಾಶ ಸಿಂದಗಿ, ತಾ.ಪಂ ಇಒ ಭಾರತಿ ಚೆಲುವಯ್ಯ,ಪ.ಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.