ಜೆಡಿಎಸ್ ಬೆಳ್ಳಿಹಬ್ಬ ಸಮಾವೇಶ ಯಶಸ್ವಿಗೆ ಶಾಸಕ ರಾಜುಗೌಡ ಕರೆ
MLA Rajugowda calls for a successful JDS Silver Jubilee convention
ದೇವರಹಿಪ್ಪರಗಿ 26: ವಿಜಯಪುರ ನಗರದ ಹೊರವಲಯ ಸಿಂದಗಿ ಬೈಪಾಸ್ ನಲ್ಲಿ ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬ ಜನತಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸಮಾವೇಶ ಯಶಸ್ವಿಗೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಕರೆ ನೀಡಿದ್ದಾರೆ. ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.
ಕೇಂದ್ರ ಸಚಿವರು ಹಾಗೂ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ರಾಜ್ಯಮಟ್ಟದ ಹಾಗೂ ಕಿತ್ತೂರ ಕರ್ನಾಟಕ ಭಾಗದ ಹಲವಾರು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿ ಆಗಲಿದ್ದಾರೆ. ಜೆಡಿಎಸ್ ಬೆಳ್ಳಿಹಬ್ಬದ ಸಮಾವೇಶದ ಯಶಸ್ವಿಗೆ ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಸಹಕರಿಸಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 