ಹಾಸ್ಟೆಲ್ ಮಕ್ಕಳ ಸುರಕ್ಷತೆಗೆ ತಾಕೀತು: ಶಾಸಕ ರಾಜುಗೌಡ
MLA Rajugowda warns against hostel children's safety
ದೇವರಹಿಪ್ಪರಗಿ 27 : ‘ವಸತಿ ನಿಲಯಗಳಲ್ಲಿ ಯಾವುದೇ ಕಾರಣಕ್ಕೂ ಅಹಿತರ ಘಟನೆ ನಡೆಯದಂತೆ ನಿಲಯಪಾಲಕರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಸೂಚನೆ ನೀಡಿದರು. ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ನೂತನ ವಸತಿ ನಿಲಯಕ್ಕೆ ಸೋಮವಾರದಂದು ದಿಢೀರ್ ಭೇಟಿ ನೀಡಿ ಪರೀಶೀಲನೆ ನಡೆಸಿ ಮಾತನಾಡಿದ ಅವರು, ವಸತಿ ನಿಲಯಗಳ ಸಮರ್ಕ ನಿರ್ವಹಣೆಯಲ್ಲಿ ವಾರ್ಡನ್ ಗಳ ಪಾತ್ರ ಪ್ರಮುಖವಾಗಿದೆ. ಬದ್ಧತೆ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಸತಿ ನಿಲಯದಲ್ಲಿನ ಎಲ್ಲಾ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಕಾಳಜಿಯಿಂದ ಕಾಣಬೇಕು. ಪ್ರತಿಯೊಂದು ವಿಷಯಗಳ ಮೇಲೆ ನಿಗಾ ವಹಿಸಬೇಕು.
ಮುಖ್ಯವಾಗಿ ವಸತಿನಿಲಯಗಳಲ್ಲಿ ಭದ್ರತೆಗೆ ಕ್ರಮ ಹಾಗೂ ಸಿಸಿಟಿವಿ ಕಡ್ಡಾಯವಾಗಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆಗೆ ಆದ್ಯತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ನಿರ್ವಹಣೆಗೆ ಕ್ರಮ ವಹಿಸಬೇಕು ಒಂದು ವೇಳೆ ಅವ್ಯವಸ್ಥೆ ಕಂಡು ಬಂದರೆ ವಾರ್ಡನ್ ಹಾಗೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ, ಪಿಡಬ್ಲ್ಯೂಡಿ ಎಇಇ ಅರುಣಕುಮಾರ ವಡಗೇರಿ, ಇಲಾಖೆಯ ಸಹಾಯಕ ನಿರ್ದೇಶಕರಾದ ಭವಾನಿ ಪಾಟೀಲ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಭೋವಿ, ವಾರ್ಡನ್ ನಫೀಸಾ ಬೇಗಂ, ಪ.ಪಂ ಅಧ್ಯಕ್ಷರ ಪ್ರತಿನಿಧಿ ಬಸವರಾಜ ದೇವಣಗಾಂವ,ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾದ ರೀಯಾಜ ಯಲಗಾರ, ಮುಖಂಡರುಗಳಾದ ಮುನೀರ್ ಅಹ್ಮದ್ ಮಳಖೇಡ, ಕಾಶಿನಾಥ ವಡವಡಗಿ, ಶರಣು ಧರಿ, ಮಹಾಂತೇಶ ವಂದಾಲ,ಕಾಸು ಕುದರಿ, ಅಪ್ಪುಗೌಡ ಪಾಟೀಲ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 