ಸಿದ್ಧೇಶ್ವರ ದೇವಸ್ಥಾನ ಸಮುದಾಯ ಭವನಕ್ಕೆ ಶಾಸಕ ಸವದಿ ಭೂಮಿ ಪೂಜೆ
MLA Savadi Bhoomi Puja at Siddheshwar Temple Community Hall
ಅಥಣಿ, 07 : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಲುಮತ ಸಮುದಾಯಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಸ್ಥಳೀಯ ದಡ್ಡಿ ಸಿದ್ಧೇಶ್ವರ ದೇವಸ್ಥಾನದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಬಿಡುಗಡೆಯಾದ 50 ಲಕ್ಷ ಅನುದಾನದ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಹಾಲು ಮತ ಸಮಾಜ ಬಾಂಧವರು ಸರಕಾರದ ಈ ಯೋಜನೆಯನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಮತ್ತು ಈ ಸಮುದಾಯ ಭವನ ಸಮಾಜದ ಸಾಂಸ್ಕೃತಿಕ ವೇದಿಕೆಯಾಗಬೇಕು ಎಂದ ಅವರು ಮಕ್ಕಳಿಗೆ ಉತ್ತಮ ಸಂಸ್ಕಾರದ ಜೊತೆಗೆ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂದು ಕಿವಿ ಮಾತು ಹೇಳಿದರು.ಇದೇ ಸಂದರ್ಭದಲ್ಲಿ ಶಾಸಕ ಲಕ್ಷ್ಮಣ ಸವದಿಯವರನ್ನು ದಡ್ಡಿ ಸಿದ್ಧೇಶ್ವರ ದೇವಸ್ಥಾನ ಕಮೀಟಿ ಮತ್ತು ಹಾಲುಮತ ಸಮಾಜ ಬಾಂಧವರ ವತಿಯಿಂದ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಹಾಲುಮತ ಸಮಾಜದ ಆನಂದ ಮಾಕಾಣಿ, ಕಲ್ಲಪ್ಪ ಮೇತ್ರಿ, ಲಕ್ಕಪ್ಪ ಯಂಕಚ್ಚಿ, ವಿಠ್ಠಲ್ ತಟ್ರಿ, ಶಿವರುದ್ರ ಘೂಳಪ್ಪನವರ, ಸುರೇಶ ಇಜೇರಿ, ಹಣಮಂತ ಮಾಕಾಣಿ, ಕೃಷ್ಣಾ ಲಂಗೋಟಿ, ಶ್ರೀಶೈಲ ಶೆಲ್ಲೆಪ್ಪಗೋಳ, ನಿಂಗಪ್ಪಾ ಐನಾಪುರೆ, ಮಹಾದೇವ ಬಿಳಿಕುರೆ, ಆನಂದ ಲಂಗೋಟಿ, ಬೀರ್ಪ ಯಕ್ಕಂಚಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 