50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ
MLA Srinivas Mane performs Bhoomi Pooja for road development and sewer construction work at a cost
50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ
ಹಾನಗಲ್ 01: ತಾಲೂಕಿನ ಹುಣಶೆಟ್ಟಿಕೊಪ್ಪ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಅನುದಾನದಡಿ 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ಸಲ್ಲಿಸಿದರು.
ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೂ ಸಹ ರಾಜ್ಯ ಸರ್ಕಾರ ಅನುದಾನ ದೊರಕಿಸುತ್ತಿದೆ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನ್ಯಾಯಯುತವಾಗಿ ಅನುದಾನ ಬಿಡುಗಡೆಗೊಳಿಸಿದರೆ ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ಲಭಿಸಲಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವೆಸಗುತ್ತಿದೆ. ಈ ಬಗ್ಗೆ ಪ್ರಶ್ನಿಸದೇ ಬಿಜೆಪಿ ಸಂಸದರು ಮೌನ ವಹಿಸಿದ್ದಾರೆ. ಕರ್ನಾಟಕದಿಂದ ಜಿಎಸ್‌ಟಿ ರೂಪದಲ್ಲಿ ಅತೀ ಹೆಚ್ಚು ತೆರಿಗೆ ಸಂಗ್ರಹಿಸುತ್ತಿದ್ದರೂ ವಾಪಸ್ ನೀಡಲು ತಾರತಮ್ಯ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ರಾಘವೇಂದ್ರ ಕರೆಪ್ಪನವರ, ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಮುಖಂಡರಾದ ಈರಣ್ಣ ಬೈಲವಾಳ, ಮಂಜಪ್ಪ ಹೊಂಬಳಿ, ಗಂಗಪ್ಪ ಆನೆಗುಡ್ಡಿ, ಶಿವಾನಂದ ಚೂರಿ, ಶಂಕ್ರ್ಪ ಕರೆಪ್ಪನವರ, ಸುರೇಶ ಮಟ್ಟಿಮನಿ, ಶೇಖರಗೌಡ ಪಾಟೀಲ, ಸುರೇಶ ಕರೆಪ್ಪನವರ, ಲಕ್ಷ್ಮಣ ಆನೆಗುಡ್ಡಿ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 