ಗುರುಭವನದಲ್ಲಿ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಸ್ಥಳಕ್ಕೆ ಭೇಟಿ

MLA Srinivasa Mane visited the place in the background of the huge job fair organized at Guru Bhava

ಗುರುಭವನದಲ್ಲಿ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಸ್ಥಳಕ್ಕೆ ಭೇಟಿ  

ಹಾನಗಲ್ 10:ಜ. 11 ರಂದು ಶನಿವಾರ ಇಲ್ಲಿನ ಗುರುಭವನದಲ್ಲಿ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತೆ ಪರೀಶೀಲಿಸಿದರು. 

  ಉದ್ಯೋಗಾಕಾಂಕ್ಷಿಗಳ ನೋಂದಣಿ ವ್ಯವಸ್ಥೆ, ಉದ್ಯೋಗದಾತರಿಗೆ ಕಲ್ಪಿಸಲಾಗಿರುವ ಕೌಂಟರ್ ಸೌಲಭ್ಯ, ಸಂದರ್ಶನ ನಡೆಸಲು ಮಾಡಿರುವ ವ್ಯವಸ್ಥೆಗಳನ್ನು ಪರೀಶೀಲಿಸಿ, ಅಗತ್ಯ ಸಲಹೆ - ಸೂಚನೆ ನೀಡಿದರು. 

  ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 50 ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು,  4200 ಕ್ಕೂ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುತ್ತಿವೆ. ತಾಲೂಕಿನ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗುತ್ತಿದೆ. ಹಾಗಾಗಿ ಮೇಳಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಸೂಕ್ತ ಮಾಹಿತಿ ನೀಡಬೇಕು, ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು. ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಉದ್ಯೋಗ ದೊರಕಿಸುವಲ್ಲಿ ಕಾಳಜಿ ವಹಿಸುವಂತೆ ಇದೇ ಸಂದರ್ಭದಲ್ಲಿ ಶ್ರೀನಿವಾಸ ಮಾನೆ ಸೂಚನೆ ನೀಡಿದರು. 

  ತಾಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಹಾಗೂ ಅವರ ಪಾಲಕರು ಮೇಳಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಕಲ್ಪಿಸಬೇಕು. ಗುರುಭವನದ ಆವರಣದಲ್ಲಿ ವಾಹನಗಳ ಪ್ರವೇಶಕ್ಕೆ ಅವಕಾಶ ನೀಡಬಾರದು. ತಾಪಂ ಆವರಣ ಹಾಗೂ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸುವಂತೆ ಸಿಪಿಐ ಆಂಜನೇಯ ಹಾಗೂ ಪಿಎ??? ಸಂಪತ್ ಆನಿಕಿವಿ ಅವರಿಗೆ ಸೂಚಿಸಿದರು.ಶಾಸಕ ಶ್ರೀನಿವಾಸ ಮಾನೆ ಅವರ 50 ನೇ ಜನ್ಮ ವರ್ಷಾಚರಣೆ ಅಂಗವಾಗಿ ಲೋಯಲ ವಿಕಾಸ ಕೇಂದ್ರ, ರೋಶನಿ ಟ್ರಸ್ಟ್‌ ಹಾಗೂ ಉದ್ಯೋಗ ಸಮೃದ್ಧಿ ಕೇಂದ್ರದ ಆಶ್ರಯದಲ್ಲಿ ಮೇಳ ಆಯೋಜಿಸಲಾಗಿದೆ.