ರೈತರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಕೆಲಸವಾಗಬೇಕು ಶಾಸಕ : ಪಠಾಣ
MLA should respond immediately to farmers' problems: Pathana
ಶಿಗ್ಗಾವಿ 24 : ರೈತ ದೇಶದ ಬೆನ್ನೆಲುಬು, ರೈತರು ನೆಮ್ಮದಿಯಿಂದ ಇದ್ದರೆ ನಮ್ಮ ಆರ್ಥಿಕತೆ ಸಂಪದ್ಭರಿತವಾಗಿರಲು ಸಾದ್ಯ. ಹಾಗಾಗಿ ರೈತರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರ ದೊರಕಿಸುವ ಕೆಲಸವಾಗಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು.ಆತ್ಮಾಯೋಜನೆಯ ಕಿಸಾನಗೋಷ್ಠಿ ಕಾರ್ಯಕ್ರಮದಡಿ ಕೃಷಿ ಮತ್ತು ವಿವಿಧ ಇಲಾಖೆಗಳು, ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ವಿವಿಧ ರೈತ ಸಂಘಟನೆಗಳ, ಸಹಯೋಗದೊಂದಿಗೆ ಶಿ ಚೌಧರಿ ಚರಣಸಿಂಗ್ ರವರ ಜನ್ಮದಿನದ ಸ್ಮರಣಾರ್ಥ ಅಂಗವಾಗಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಯಾವುದೇ ಫಲಾಪೇಕ್ಷೆಗಳನ್ನು ಬಯಸದೆ ದುಡಿಯುವ ರೈತರ ಬೆಳೆಗಳಿಗೆ ಸಮರ್ಕವಾದ ವೈಜ್ಞಾನಿಕ ಬೆಲೆ ದೊರೆತಾಗ ಮಾತ್ರ ರೈತರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಆಳುವ ಸರ್ಕಾರಗಳು ಯಾವುದೇ ಇದ್ದರೂ ರೈತರವಿಗಿರಬೇಕು. ಸಮಸ್ಯೆ ಅಥವಾ ಸಹಾಯ ಎಂದು ಕಛೇರಿಗಳಿಗೆ ಬಂದ ರೈತರನ್ನು ಅಧಿಕಾರಿಗಳು ನಿರ್ಲಕ್ಷ ಮಾಡದೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಎಂದರು.ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯ.ಶಿಗ್ಗಾವಿಯಲ್ಲಿನ ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ.
ನೋಂದಣಿಯನ್ನು ಪುನಃ ಪ್ರಾರಂಭಿಸಿ, ತಾಲೂಕಿನಲ್ಲಿಯೆ ಬೆಂಬಲ ಬೆಲೆಯೊಂದಿಗೆ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು. ಇಲ್ಲಿ ನೊಂದಣಿ ಮಾಡಿಸಿದ ರೈತರು ದೂರದ ಶಿಕಾರಿಪುರ ಕೆಎಂಎಫ್ ಘಟಕಕ್ಕೆ ಸಾಗಿಸುವುದರಿಂದ ರೈತರ ಸಮಯದ ಜೊತೆಗೆ ನಷ್ಟ ಉಂಟಾಗುತ್ತದೆ. ಶಾಸಕರು ಕೂಡಲೇ ಶಿಗ್ಗಾವಿ ಪಟ್ಟಣದಲ್ಲಿಯೆ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ರೈತ ಸಂಘಟನೆಗಳ ಮುಖಂಡರು ಶಾಸಕರಲ್ಲಿ ಮನವಿ ಮಾಡಿದರುಕಾರ್ಯಕ್ರಮದಲ್ಲಿ ರೈತ ಸಂಘಟನೆಗಳ ಮುಖಂಡರು ಹಾಗೂ ಸಾಧನೆ ಮಾಡಿದ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು.ತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ, ಕೃಷಿಕ ಸಮಾಜದ ಅಧ್ಯಕ್ಷ ಹನುಮರಡ್ಡಿ ನಡುವಿನ, ಸಹಾಯಕ ಕೃಷಿ ನಿರ್ದೇಶಕ ಕೊಟ್ರೇಶ್ ಗೆಜಲಿ, ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಶ್ರೀಧರ್ ದಾಸರ, ರಾಜು ಜಂಗ್ಲೆಪ್ಪನವರ, ಮಂಗಳಾ ಪಾಟೀಲ, ಎಸ್ ಆರ್ ದಾವಣಗೆರೆ, ಬಸಮ್ಮ ಬಾದಾಮಗಟ್ಟಿ, ವಿಜಯಲಕ್ಷ್ಮಿ ಮುಂದಿನಮನಿ, ಸಂಗೀತಾ ಕುರೇರ, ಶಶಿಧರ ಹೊನ್ನಣ್ಣವರ, ಈರಣ್ಣ ಸಮಗೊಂಡ, ಶಂಕರಗೌಡ ಪಾಟೀಲ, ಎನ್ ಡಿ ಮರಿಗೌಡರ, ಅಶೋಕ ಕಾಳೆ, ಬಸಲಿಂಗಪ್ಪ ನರಗುಂದ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ರೈತ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತಾಲೂಕ ತಾಂತ್ರಿಕ ವ್ಯವಸ್ಥಾಪಕ ವನರಾಜ ಬಣಕಾರ ಕಾರ್ಯಕ್ರಮ ನಿರ್ವಹಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 